ಬಿಎಸ್‌ವೈ-ಬೊಮ್ಮಾಯಿ (ಸಂಗ್ರಹ ಚಿತ್ರ)
ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ! ಅಂತ ಕಾಂಗ್ರೆಸ್ ವ್ಯಂಗ್ಯವಾಡಿದೆ.ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ (monsoon session) ಆರಂಭವಾಗಿದೆ. ಮೊದಲ ಬಾರಿಗೆ ವಿಪಕ್ಷ ನಾಯಕನಿಲ್ಲದೇ (Leader of the Opposition) ಅಧಿವೇಶನ ನಡೆದಿದೆ. ಅತ್ತ ಬಿಜೆಪಿಯಲ್ಲಿ (BJP) ವಿಪಕ್ಷ ನಾಯಕನ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ನಿನ್ನೆ ದೆಹಲಿಯಲ್ಲಿ (Delhi) ನಡೆದ ಬಿಜೆಪಿ ವರಿಷ್ಠರ ಹೈವೋಲ್ಟೇಜ್ ಮೀಟಿಂಗ್ ಸಕ್ಸಸ್ ಆಗಿಲ್ಲ. ಹೀಗಾಗಿ ಇಂದು ಕೇಂದ್ರದ ಬಿಜೆಪಿ ವಿಕ್ಷಕರು ಬೆಂಗಳೂರಿಗೆ (Bengaluru) ಆಗಮಿಸಿ, ಚರ್ಚೆ ನಡೆಸಲಿದ್ದಾರೆ. ಈ ನಡುವೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ವ್ಯಂಗ್ಯದ ಸರಣಿ ಟ್ವೀಟ್ (Tweet) ಮಾಡಿದೆ. 66 ಶಾಸಕರ ಪೈಕಿ ವಿಪಕ್ಷನಾಗುವ ಅರ್ಹತೆ ಯಾರಿಗೂ ಇಲ್ಲವೇ ಅಂತ ಕಾಂಗ್ರೆಸ್ ಟ್ವೀಟ್ ಮಾಡಿದೆ.ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ?ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ (guarantee) ಯೋಜನೆಗಳ ಜಾರಿಯೂ ಆಯ್ತು, ಡಿಯರ್ ಬಿಜೆಪಿ, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ! ಅಂತ ವ್ಯಂಗ್ಯವಾಡಿದೆ.66 ಶಾಸಕರಲ್ಲಿ ಒಬ್ಬರಿಗೂ ಅರ್ಹತೆಯಿಲ್ಲವೇ?ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು ಅಂತ ಕಾಂಗ್ರೆಸ್ ವ್ಯಂಗ್ಯವಾಡಿದೆ. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಅಂತ ಕಾಂಗ್ರೆಸ್ ಹೇಳಿದೆ.ಇದನ್ನೂ ಓದಿ: Speaker: ವಿಧಾನಸಭೆಯ ಹೆಡ್ ಮಾಸ್ಟರ್, ಶಾಸಕರನ್ನು ಕಂಟ್ರೋಲ್ ಮಾಡ್ತಾರೆ ಸ್ಪೀಕರ್!ಸದನಕ್ಕೆ ಕಪ್ಪು ಚುಕ್ಕೆಯನ್ನಿಟ್ಟ ಬಿಜೆಪಿಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಅಂತ ಕಾಲೆಳೆದಿದೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ‘ಯೂ ಇಲ್ಲ! ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ. ವಿಪಕ್ಷ ನಾಯಕನ ಸ್ಥಾನ ಮಾರಾಟಕ್ಕಿದೆಯೇ?ಇನ್ನು ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಅಂತ ಕಾಂಗ್ರೆಸ್ ಪ್ರಶ್ನಿಸಿದೆ. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿತ್ತು ಅಂತ ಕಾಂಗ್ರೆಸ್ ಪ್ರಶ್ನಿಸಿದೆ.
Dear @BJP4Karnataka ,
ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ.
ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ.
ಪಾಪ! pic.twitter.com/YW4RqHPJD2
— Karnataka Congress (@INCKarnataka) July 3, 2023
ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಇದಕ್ಕೆ ಬಿಜೆಪಿ ಕರ್ನಾಟಕ ಉತ್ತರಿಸಬೇಕು ಅಂತ ಟ್ವೀಟ್‌ನಲ್ಲಿ ಕಾಂಗ್ರೆಸ್ ಆಗ್ರಹಿಸಿದೆ.ಇದನ್ನೂ ಓದಿ: Opposition Party Leader: ಯಡಿಯೂರಪ್ಪ ಇಲ್ಲ, ಈಶ್ವರಪ್ಪನೂ ಇಲ್ಲ! ಈ ಬಾರಿ ಸರ್ಕಾರಕ್ಕೆ ಮೂಗುದಾರ ಹಾಕುವ ವಿಪಕ್ಷ ನಾಯಕ ಯಾರು?ನಿಮ್ಮ ಹೈಕಮಾಂಡ್ ಗ್ಯಾರಂಟಿ ನೀಡಿಲ್ಲವೇ?ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ. ಪಾಪ! ಅಂತ ಟ್ವಿಟರ್‌ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯವಾಡಿದೆ.

Post a Comment