ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
ವಿರೋಧ ಪಕ್ಷದ ನಾಯಕ ಸ್ಥಾನ ಉತ್ತರ ಕರ್ನಾಟಕ್ಕೆ ಸಿಗುತ್ತಾ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜೋಶಿ ಅವರು, ಯಾರಿಗೆ ಸಿಗುತ್ತೇ ನೋಡೋಣಾ ಎಂದರು. ಧಾರವಾಡ: ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ರೇಣುಕಾಚಾರ್ಯ (Renukacharya) ಅವರಿಗೆ ನೋಟಿಸ್ ಕೊಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿಎಸ್‌ವೈ (BS Yediyurappa) ಅವರೇ ವಹಿಸಿದ್ದರು. ಬಿಎಸ್‌ವೈ ಅವರೂ ರೇಣುಕಾಚಾರ್ಯ ಕರೆದು ಮಾತನಾಡಿದ್ದಾರೆ. ನಾನು ಸಹ ಇವತ್ತು ರೇಣುಕಾಚಾರ್ಯರನ್ನು ಕರೆದು ಮಾತನಾಡುವೆ, ನಮ್ಮದು ಒಂದು ಪರಿವಾರ ಇದ್ದಂತೆ ಎಂಬ ಮನವರಿಕೆ ಮಾಡುವೆ. ಪಕ್ಷದ (Party) ಚೌಕಟ್ಟಿನಲ್ಲಿಯೇ ಮಾತನಾಡುವಂತೆ ವಿನಂತಿ ಮಾಡುವೆ. ಒಂದಿಷ್ಟು ಆಕ್ರೋಶ ದಲ್ಲಿ ಕೆಲವರು ಮಾತನಾಡಿದ್ದರು. ಆದರೆ ಈಗ ಅದು ಸರಿ ಹೋಗಿದೆ. ಪಕ್ಷದ ಮೇಲೆ ಯಾರಿಗೂ ಅಸಮಾಧಾನ ಇಲ್ಲ, ಪರಸ್ಪರ ಭಿನ್ನಾಭಿಪ್ರಾಯದಿಂದಾಗಿ ಮಾತನಾಡಿದ್ದಾರೆ. ಆದರೆ ಸಾರ್ವಜನಿಕವಾಗಿ (Publicly) ಮಾತನಾಡದಂತೆ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ ಅವರು, ಕಟೀಲ್ ಅವರ ಅಧ್ಯಕ್ಷತೆ, ಬಿಎಸ್‌ವೈ ನೇತೃತ್ವದಲ್ಲಿಯೇ ಸಭೆ ಆಗಿದೆ. ಇಲ್ಲಿ ಅವರ ಪರ, ಇವರ ಪರ ಎಂಬ ಪ್ರಶ್ನೆಯೆ ಇಲ್ಲ. ಯಾರೂ ಸಾರ್ವಜನಿಕವಾಗಿ ಹೇಳಿಕೆ ಕೊಡಬಾರದೆಂಬ ನಿಯಮ ಹೇಳಿದ್ದೇವೆ ಅಷ್ಟೇ. ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಹೇಳಿದ್ದೇವೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: Siddaramaiah ಸರ್ಕಾರದ ವಿರುದ್ಧ YST ಬಾಂಬ್ ಹಾಕಿದ ಹೆಚ್ಡಿಕೆ ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಪ್ರತಿಭಟನೆ ಮಾಡಲಿದೆ. ಇವರ ಬೋಗಸ್ ಗ್ಯಾರಂಟಿ ಬಗ್ಗೆ ಹೋರಾಟ ಮಾಡುತ್ತೇವೆ. ನೀವು 10ಕೆಜಿ ಅಕ್ಕಿಯ ಹಣ ಕೊಡಬೇಕು, ಇಲ್ಲವೇ ಕ್ಷಮೆ ಕೇಳಬೇಕು. ನಾವು 5ಕೆಜಿ ಹಣ ಕೊಡುತ್ತಿದ್ದೇವೆ. ನರೇಂದ್ರ ಮೋದಿಯವರು 5ಕೆಜಿ ಅಕ್ಕಿ ಕೊಡುತ್ತಿದ್ದಾರೆ ಎಂಬ ಸತ್ಯ ಹೇಳಬೇಕು. ಈ ಸತ್ಯವನ್ನು ಹೇಳಿ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ ಜನರಿಗೆ 10 ಕೆಜಿ ಅಕ್ಕಿಯ ಹಣ ಕೊಡಬೇಕು ಎಂದು ಒತ್ತಾಯ ಮಾಡಿದರು.ವಿರೋಧ ಪಕ್ಷದ ನಾಯಕ ಸ್ಥಾನ ಉತ್ತರ ಕರ್ನಾಟಕ್ಕೆ ಸಿಗುತ್ತಾ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜೋಶಿ ಅವರು, ಯಾರಿಗೆ ಸಿಗುತ್ತೇ ನೋಡೋಣಾ ಎಂದರು. ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಕಲ್ಲೇಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟ ಅವರು, ಇದೊಂದು ವಿಕೃತ ಮನೋಭಾವ. ದೇಶದ ಅನೇಕ ಭಾಗದಲ್ಲಿ ಈ ರೀತಿ ಆಗುತ್ತಿದೆ, ಇದು ಒಳ್ಳೆಯದಲ್ಲ.ವಂದೇ ಭಾರತ ರೈಲು ದೇಶದ ಆಸ್ತಿ. ದೇಶದಲ್ಲಿ ಆಧುನಿಕ ಸೌಲಭ್ಯ ಬೆಳೆಯಲು ಈ ರೈಲು ಆಗಿದೆ. ಭಾರತದಲ್ಲಿ ತಯಾರಾಗಬೇಕೆಂಬ ಕಾಳಜಿಯಿಂದ ಪ್ರಧಾನಿಗಳು ಈ ರೈಲುಗಳನ್ನು ಮಾಡುತ್ತಿದ್ದಾರೆ. ರಸ್ತೆ ಪಕ್ಕಕ್ಕೆ ನಿಂತು ಕಲ್ಲು ಎಸೆಯುತ್ತಿದ್ದಾರೆ. ಹೀಗಾಗಿ ರೈಲಿನ ಒಳಗೆ ಇದ್ದವರಿಗೆ ಅವರು ಯಾರು ಅಂತಾ ಗೊತ್ತಾಗುವುದಿಲ್ಲ. ಹೀಗಾಗಿ ಅಲ್ಲಲ್ಲಿ ಸಿಸಿ ಟಿವಿ ಕ್ಯಾಮರಾ ಹಾಕಬೇಕು. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಬಲಪಡಿಸಬೇಕು ಎಂದು ಹೇಳಿದರು.

Post a Comment