ಬಂಧಿತ ಆರೋಪಿಗಳು
Bengaluru Gangrape: ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ನಿರಂತರವಾಗಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ.ಬೆಂಗಳೂರು: ರಾಜಧಾನಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Gangrape) ನಡೆಸಿದ ಮೂವರು ಆರೋಪಿಗಳನ್ನು (Accused Arrest) ಕೊಡಿಗೇಹಳ್ಳಿ ಪೊಲೀಸರು (Police) ಬಂಧಿಸಿದ್ದಾರೆ. ಸಂತ್ರಸ್ತೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸಲಾಗಿತ್ತು. ಸಂತ್ರಸ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆ್ಯಂಡಿ ಜಾರ್ಜ್, ಸಂತೋಷ್, ಶಶಿ ಬಂಧಿತ ಆರೋಪಿಗಳು. ಎ1 ಆರೋಪಿ ಆ್ಯಂಡಿ ಜಾರ್ಜ್ ಖಾಸಗಿ ಕಾಲೇಜಿನಲ್ಲಿ (Private College) ಡ್ಯಾನ್ಸ್ ಟೀಚರ್ (Dance Teacher) ಆಗಿ ಕೆಲಸ ಮಾಡಿಕೊಂಡಿದ್ದನು. ಬಂಧಿತರಿಂದ ಮೊಬೈಲ್, ಪೆನ್ ಡ್ರೈವ್ ಹಾಗೂ ಲ್ಯಾಪ್ಟ್ಯಾಪ್ ವಶಕ್ಕೆ ಪಡೆಯಲಾಗಿದೆ.ಎರಡು ವರ್ಷಗಳ ಹಿಂದೆ ಎ1 ಆರೋಪಿ ಆ್ಯಂಡಿ ಜಾರ್ಜ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿದ್ಯಾರ್ಥಿನಿಯ ಪರಿಚಯ ಆಗಿತ್ತು. ನಂತರ ಪ್ರೀತಿಸುವುದಾಗಿ ಹೇಳಿ ಹಲವು ಕಡೆಗಳಲ್ಲಿ ಸಂತ್ರಸ್ತೆ ಜೊತೆ ಸುತ್ತಾಡಿದ್ದಾನೆ. ಈ ವೇಳೆ ಕೆಲವು ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದುಕೊಂಡಿದ್ದನು.ವಿಡಿಯೋ, ಫೋಟೋ ತೋರಿಸಿ ಬ್ಲ್ಯಾಕ್ಮೇಲ್ನಂತರ ಅದೇ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ನಿರಂತರವಾಗಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೂವರ ಚಿತ್ರಹಿಂಸೆ ತಾಳಲಾರದೇ ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಕೊಡಿಗೇಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಮೊಬೈಲ್ ಹಾಗೂ ಲ್ಯಾಪ್ಟಾಪ್ನಲ್ಲಿ ಹಲವು ಫೋಟೋ ಮತ್ತು ವಿಡಿಯೋಗಳು ಲಭ್ಯವಾಗಿವೆ. ಇದೇ ರೀತಿ ಹಲವರಿಗೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Crime News: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯನ್ನು ಹೋಟೆಲ್‌ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ!ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿಕೆನೊಂದ ಮಹಿಳೆ ಮತ್ತು ಆರೋಪಿ ಆ್ಯಂಡಿ ಜಾರ್ಜ್ ಇಬ್ಬರಿಗೂ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿತ್ತು. ಎ1 ಆರೋಪಿ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿದ್ದಾನೆ. ಕಾಲೇಜಿನಲ್ಲಿ ಇದೇ ರೀತಿ ವಿದ್ಯಾರ್ಥಿನಿಯರಿಗೆ ಮೋಸ ಮಾಡಿದ್ದನಾ ಎಂಬುದರ ಬಗ್ಗೆಯೂ ತನಿಖೆ ನಡೆಲಾಗುತ್ತಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.

Post a Comment