HDK vs Siddaramaiah: ನೀವು ಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದೀರಿ, ಬೇಗ ಗುಣಮುಖರಾಗಿ! ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಟ್ವೀಟ್


 ಸಿದ್ದರಾಮಯ್ಯ-ಎಚ್‌ಡಿಕೆ (ಸಂಗ್ರಹ ಚಿತ್ರ)

ಎಚ್‌ಡಿಕೆ ವಿರುದ್ಧ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, “ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ” ಎಂದು ತಿರುಗೇಟು ನೀಡಿದ್ದಾರೆಬೆಂಗಳೂರು: ಹಾಲಿ ಸಿಎಂ (CM) ಹಾಗೂ ಮಾಜಿ ಸಿಎಂ (former CM) ನಡುವಿನ ಸಂಘರ್ಷ ತಾರಕಕ್ಕೇರಿದೆ. ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಹಾಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಟ್ವಿಟರ್‌ನಲ್ಲಿ (Twitter) ಕಿಡಿಕಾರಿದ್ದಾರೆ. ಸಚಿವ ಚಲುವರಾಯಸ್ವಾಮಿ (N. Chaluvarayaswamy) ವಿರುದ್ಧ ಮಂಡ್ಯ (Mandya) ಕೃಷಿ ಇಲಾಖೆ ಅಧಿಕಾರಿಗಳು ಬರೆದ ಮತ್ತು ರಾಜಭವನದಿಂದ ಸರ್ಕಾರಕ್ಕೆ ಬಂದ ಪತ್ರ ನಕಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. “ನಕಲಿ ಪತ್ರದ ಸೃಷ್ಟಿಕರ್ತ ಬಿಜೆಪಿನಾ ಅಥವಾ ಬ್ರದರಾ?” ಎಂದು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಎಚ್‌ಡಿಕೆ, “ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ಕಿಡಿಕಾರಿದ್ದರು. ಇದೀಗ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, “ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ” ಎಂದು ತಿರುಗೇಟು ನೀಡಿದ್ದಾರೆ.    ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದೀರಿ! ಹೀಗಂತ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹರಿಹಾಯ್ದಿದ್ದಾರೆ. ಸನ್ಮಾನ್ಯ ಎಚ್‌ಡಿ ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ ಅಂತ ಟಾಂಗ್ ಕೊಟ್ಟಿದ್ದಾರೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಸನ್ಮಾನ್ಯ @hd_kumaraswamy ಅವರೇ,

ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.

ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.

ಇನ್ನು ನೀವು… https://t.co/dXtacPzEHE

— Siddaramaiah (@siddaramaiah) August 8, 2023

ಬಿಜೆಪಿ ಹಾಗೂ ಎಚ್‌ಡಿಕೆಗೆ ಟಾಂಗ್ ಕೊಟ್ಟಿದ್ದ ಸಿಎಂಇದಕ್ಕೂ ಮುನ್ನ ಬಿಜೆಪಿ ಹಾಗೂ ಎಚ್‌ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದರು. ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರೂ ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. ಕರ್ನಾಟಕದ ಬಿಜೆಪಿ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ "ಬ್ರದರ್ರೋ"? ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.ಇದನ್ನೂ ಓದಿ: DK Shivakumar VS CT Ravi: ಡಿಕೆಶಿ ರಿಯಲ್ ಎಸ್ಟೇಟ್ ಮಾಡಿ 1500 ಕೋಟಿ ವೈಟ್ ಮಾಡಿದ್ದಾರೆ! ಸಿಟಿ ರವಿ ಗಂಭೀರ ಆರೋಪಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದ ಎಚ್‌ಡಿಕೆಇದೇ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಎಚ್‌ಡಿಕೆ ಸಿಎಂಗೆ ತಿರುಗೇಟು ನೀಡಿದ್ದರು. ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಕಿಡಿಕಾರಿದ್ದರು.ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞ!ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಅಂತ ಸಿದ್ದುಗೆ ಎಚ್‌ಡಿಕೆ ತಿರುಗೇಟು ನೀಡಿದ್ದರು.

Post a Comment

Previous Post Next Post