ಇಸ್ರೋಗೆ ಮೋದಿ ಅಭಿನಂದನೆ
ಭೂಮಿಯ ಸಮೀಪವಿರುವ ನಕ್ಷತ್ರದ ಬಗ್ಗೆ ಅಧ್ಯಯನ ಮಾಡಲು ಮಿಷನ್ ಆದಿತ್ಯ ಎಲ್1 ಬರೋಬ್ಬರಿ 15 ಲಕ್ಷ ಕಿಲೋಮೀಟರ್ ಪ್ರಯಾಣಿಸಲಿದೆ. ಇಸ್ರೋದಿಂದ PSLV-C57 ರಾಕೆಟ್ ಉಡಾವಣೆ ಆಗುತ್ತಿದ್ದಂತೆ ಗಣ್ಯರು ಭಾರತೀಯ ವಿಜ್ಞಾನಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಶ್ರೀಹರಿಕೋಟಾ: ಚಂದ್ರಯಾನ -3 ರ ಯಶಸ್ಸಿನ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಸೂರ್ಯನನ್ನು ಅಧ್ಯಯನ ಮಾಡಲು ತನ್ನ ಹೊಸ ಮಿಷನ್ ಆದಿತ್ಯ-ಎಲ್ 1 (Aditya L1) ಅನ್ನು ಬೆಳಿಗ್ಗೆ 11:50 ಕ್ಕೆ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಿದೆ.ಐದು ವರ್ಷಗಳ ಅವಧಿಯಲ್ಲಿ ಭೂಮಿಯ ಸಮೀಪವಿರುವ ನಕ್ಷತ್ರದ ಬಗ್ಗೆ ಅಧ್ಯಯನ ಮಾಡಲು ಮಿಷನ್ ಆದಿತ್ಯ ಎಲ್1 ಬರೋಬ್ಬರಿ 15 ಲಕ್ಷ ಕಿಲೋಮೀಟರ್ ಪ್ರಯಾಣಿಸಲಿದೆ. ಇಸ್ರೋದಿಂದ PSLV-C57 ರಾಕೆಟ್ ಉಡಾವಣೆ ಆಗುತ್ತಿದ್ದಂತೆ ಗಣ್ಯರು ಭಾರತೀಯ ವಿಜ್ಞಾನಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Mission Aditya-L1 ಯಶಸ್ವಿ ಉಡಾವಣೆ, ಸೂರ್ಯನ ರಹಸ್ಯ ಬೇಧಿಸಲು ಹೊರಟ ಇಸ್ರೋ ನೌಕೆ!ಇಸ್ರೋವನ್ನು ಶ್ಲಾಘಿಸಿದ ಪ್ರಧಾನಿ ಮೋದಿಆದಿತ್ಯ L1 ಯಶಸ್ವಿ ಉಡಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋವನ್ನು ಶ್ಲಾಘಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ಮತ್ತು ಅದರ ತಂಡಕ್ಕೆ ಅಭಿನಂದನೆಗಳು. ‘ಇಡೀ ಮಾನವೀಯತೆಯ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ ಇನ್ನು ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ರ ಉಡಾವಣೆಯು ಭಾರತದ ಸ್ಥಳೀಯ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಪಥಕ್ಕೆ ಕೊಂಡೊಯ್ಯುವ ಒಂದು ಹೆಗ್ಗುರುತಿನ ಸಾಧನೆಯಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ, ‘ಇದು ಬಾಹ್ಯಾಕಾಶ ಮತ್ತು ಆಕಾಶ ವಿದ್ಯಮಾನಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ. ಈ ಅಸಾಧಾರಣ ಸಾಧನೆಗಾಗಿ ಇಸ್ರೋನಲ್ಲಿನ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳನ್ನು ನಾನು ಅಭಿನಂದಿಸುತ್ತೇನೆ. ಮಿಷನ್‌ನ ಯಶಸ್ಸಿಗೆ ನನ್ನ ಶುಭಾಶಯಗಳು’ ಎಂದು ಅವರು ತಿಳಿಸಿದ್ದಾರೆ.ಇದನ್ನೂ ಓದಿ: Love Case: ಹಿಂದೂ ಯುವತಿ-ಮುಸ್ಲಿಂ ಯುವಕನ ಪ್ರೇಮ ಪ್ರಕರಣ ಇಬ್ಬರ ಆತ್ಮಹತ್ಯೆಯಲ್ಲಿ ಅಂತ್ಯ!'ಐತಿಹಾಸಿಕ ದಿನ' ಎಂದ ರಕ್ಷಣಾ ಸಚಿವಇನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ‘ಇದು 1.4 ಶತಕೋಟಿ ಭಾರತೀಯರಿಗೆ ಶನಿವಾರ ಐತಿಹಾಸಿಕ 'ಸೂರ್ಯ ದಿನ'. ಇಂದು, ಭಾರತದ ಮೊದಲ ಸೌರ ಮಿಷನ್ ಆದಿತ್ಯ-ಎಲ್ 1 ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಮಿಷನ್ ಚಂದ್ರಯಾನ 3 ಮತ್ತು ಮಂಗಳಯಾನದ ಸೂಪರ್ ಯಶಸ್ಸಿನ ನಂತರ ಭಾರತವು ಈಗ ಸೂರ್ಯನ ಕಡೆಗೆ ಸಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.ಸಿದ್ದರಾಮಯ್ಯ ಅಭಿನಂದನೆಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದು, ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ತುಂಬುಹೃದಯದ ಅಭಿನಂದನೆಗಳು. ಇದರೊಂದಿಗೆ ಸೂರ್ಯನ ಅಧ್ಯಯನ ನಡೆಸುವ ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರೆತಿದ್ದು, ಈ ಯೋಜನೆಯ ಮುಂದಿನ ಎಲ್ಲಾ ಹಂತಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ ಎಂದಿದ್ದಾರೆ.ಸೂರ್ಯಾಯ ನಮಃ' ಎಂದ ಹಿಮಂತ ಶರ್ಮಾ!ಆದಿತ್ಯ-ಎಲ್1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಸ್ರೋವನ್ನು ಅಭಿನಂದಿಸಿದ್ದಾರೆ. ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಆದಿತ್ಯ-ಎಲ್ 1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಒಂದು ಮಹತ್ವದ ಸಂದರ್ಭ, ಅಲ್ಲಿ ಸಾವಿರಾರು ವರ್ಷಗಳಿಂದ ನಾವು ಸೂರ್ಯ ದೇವನನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.

Post a Comment