Ganesh Chaturthi: ಗಣೇಶ ಹಬ್ಬದ ಕುರಿತು ಅತ್ಯಂತ ಮಹತ್ವದ ಸೂಚನೆ ನೀಡಿದ BBMP


 ಇದೇ ತಿಂಗಳು 18 ರಂದು ಗಣೇಶ ಚತುರ್ಥಿ ಇದೆ. ಹಬ್ಬಕ್ಕೆ ಎಲ್ಲೆಡೆ ಸಕಲ ತಯಾರಿ ನಡೆಯುತ್ತಿದೆ. ಹಬ್ಬ ಕುರಿತಂತೆ ಬಿಬಿಎಂಪಿ ಮಹತ್ವದ ಸೂಚನೆ ನೀಡಿದೆ. ಏನು ಅಂತ ನೋಡಿ.ಇದೇ ತಿಂಗಳು 18 ರಂದು ಗಣೇಶ ಚತುರ್ಥಿ ಇದೆ. ಹಬ್ಬಕ್ಕೆ ಎಲ್ಲೆಡೆ ಸಕಲ ತಯಾರಿ ನಡೆಯುತ್ತಿದೆ. ಹಬ್ಬ ಕುರಿತಂತೆ ಬಿಬಿಎಂಪಿ ಮಹತ್ವದ ಸೂಚನೆ ನೀಡಿದೆ. ಪರಿಸರ ಸ್ನೇಹಿ ಹಬ್ಬ ಆಚರಿಸಲು ಬಿಬಿಎಂಪಿ ಸಾರ್ವಜನಿಕರಿಗೆ ಸಲಹೆ ನೀಡಿದೆ.ಪಾಲಿಕೆ ವತಿಯಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿದ್ದಾರೆ.ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗುತ್ತಂತೆ.ಸ್ಯಾಂಕಿ ಕೆರೆ, ಯಡಿಯೂರು ಕೆರೆ, ಹಲಸೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುಯತ್ತಿದೆ.ಅಷ್ಟೇ ಅಲ್ಲದೇ ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ಬ್ಯಾರಿಕೇಡ್ ಹಾಕಬೇಕು. ಅಲ್ಲಿ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸಲಹೆ ನೀಡಲಾಗಿದೆ.ವಿಸರ್ಜನಾ ಸಮಯದಲ್ಲಿ ಹೂವು, ಬಾಳೆಯ ಕಂದು, ಮತ್ತಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಿಗದಿತ ಕಂಟೈನರ್‍ಗಳ ಮೂಲಕ ಆವಾಗಲೇ ತೆರವುಗೊಳಿಸಲು ವಾಹನಗಳನ್ನು ನಿಗದಿ ಮಾಡಲಾಗ್ತಿದೆ.ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ತಯಾರಿಸುವವರಿಗೆ ದಂಡ ವಿಧಿಸಲಾಗುತ್ತೆ.

Post a Comment

Previous Post Next Post