I.N.D.I.A ಒಕ್ಕೂಟ
ನಾವು, ಭಾರತದ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ವ್ಯವಸ್ಥೆಯನ್ನು ತಕ್ಷಣವೇ ಪ್ರಾರಂಭಿಸಲಾಗುವುದು ಎಂದು ಒಕ್ಕೂಟ ಹೇಳಿಕೆ ಬಿಡುಗಡೆ ಮಾಡಿದೆ. ಮುಂಬೈ : 2024 ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟವನ್ನು (NDA Alliance) ಸೋಲಿಸಲು ಸಾಧ್ಯವಾದಷ್ಟೂ ಒಟ್ಟಾಗಿ ಸ್ಪರ್ಧಿಸಲು ವಿರೋಧ ಪಕ್ಷದ (Opposition Meeting) ಇಂಡಿಯಾ (I.N.D.I.A) ಮೈತ್ರಿಕೂಟದ ಘಟಕ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ. ಇಂದು ಮುಂಬೈನಲ್ಲಿ (Mumbai) ನಡೆದ ಮೈತ್ರಿಕೂಟದ ಮೂರನೇ ಕಾರ್ಯತಂತ್ರದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಸಭೆಯಲ್ಲಿದ್ದ ಪ್ರಮುಖರುಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್ಜೆಡಿ ನಾಯಕ ಲಾಲು ಪ್ರಸಾದ್ ಸೇರಿ ಹಲವು ಪಕ್ಷಗಳ ನಾಯಕರು ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟದ ಪ್ರತಿಪಕ್ಷಗಳು ಜಂಟಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದೇವೆ ಎಂದು ನಾಯಕರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.ಇದನ್ನೂ ಓದಿ: Explained: ಒಂದು ರಾಷ್ಟ್ರ, ಒಂದು ಚುನಾವಣೆ ಎಂದರೇನು? ಈಗೇಕೆ ಅದನ್ನು ಮಾಡಲಾಗುತ್ತಿದೆ?ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧೆ" ನಾವು, ಭಾರತದ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ವ್ಯವಸ್ಥೆಯನ್ನು ತಕ್ಷಣವೇ ಪ್ರಾರಂಭಿಸಲಾಗುವುದು ಮತ್ತು ಕೊಡು-ಕೊಳ್ಳುವಿಕೆಯ ಸಹಯೋಗದ ಮನೋಭಾವದಲ್ಲಿ ಶೀಘ್ರವಾಗಿ ಮುಕ್ತಾಯಗೊಳಿಸಲಾಗುವುದು," ಒಕ್ಕೂಟದ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ. ಪಕ್ಷಗಳು " ಸಾರ್ವಜನಿಕ ಕಾಳಜಿ ಮತ್ತು ಪ್ರಾಮುಖ್ಯತೆಯ ವಿಷಯಗಳ ಕುರಿತು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವಾಗಿ ಸಾರ್ವಜನಿಕ ರ್‍ಯಾಲಿಗಳನ್ನು ಆಯೋಜಿಸುತ್ತವೆ. ಮೈತ್ರಿಕೂಟವು ರಾಜಕೀಯ ಸಂವಹನ ಮತ್ತು ಮಾಧ್ಯಮ ಕಾರ್ಯತಂತ್ರಗಳ ಕುರಿತು ತಮ್ಮ ನಡುವೆ ಸಮನ್ವಯ ಸಾಧಿಸಲು ನಿರ್ಧರಿಸಿದೆ ಮತ್ತು ವಿವಿಧ ಭಾಷೆಗಳಲ್ಲಿ 'ಜುಡೇಗಾ ಭಾರತ್, ಜಿತೀಗ ಇಂಡಿಯಾ' ಎಂಬ ಥೀಮ್‌ನೊಂದಿಗೆ ಪ್ರಚಾರ ನಡೆಸಲು ಸಜ್ಜಾಗಿದೆ. ವಿವಿಧ ಭಾಷೆಗಳಲ್ಲಿ ಥೀಮ್‌ನೊಂದಿಗೆ ಸಂಯೋಜಿಸಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ " ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಸಮನ್ವಯ ಸಮಿತಿ ರಚನೆಇನ್ನು ಶುಕ್ರವಾರದ ಸಭೆಯಲ್ಲಿ ಇಂಡಿಯಾ ಒಕ್ಕೂ ಮೈತ್ರಿಕೂಟದ ಸಮನ್ವಯ ಸಮಿತಿಯನ್ನ ರಚಿಸಿದೆ. ಎನ್ಸಿಪಿ ವರಿಷ್ಠ ಹಾಗು ಕೇಂದ್ರದ ಮಾಜಿ ಸಚಿವ ಶರದ್ ಪವಾರ್, ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಆರ್ಜೆಡಿ ಮುಖಂಡ ಹಾಗು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಡಿಎಂಕೆ ನಾಯಕ ಹಾಗು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಉದ್ಧವ್ ಠಾಕ್ರೆ ಬಣದ ಶಿವಸೇನೆಯ ನಾಯಕ ಸಂಜಯ್ ರಾವತ್, ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಮೆಹಬೂಬಾ ಮುಪ್ತಿ ಹಾಗೂ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಸೇರಿದ್ದಾರೆ.ಇದನ್ನೂ ಓದಿ: Gruha Lakshmi Scheme: 5 ಗ್ಯಾರಂಟಿ ಸುಳ್ಳು ಎಂದು ಟೀಕಿಸಿದವರಿಗೆ ಉತ್ತರ ಕೊಟ್ಟಿದ್ದೇವೆ: ಮೋದಿಗೆ ರಾಹುಲ್ ಟಾಂಗ್!ಏಜೆನ್ಸಿಗಳ ದಾಳಿಗೆ ಸಜ್ಜಾಗಿಇದಕ್ಕೂ ಮೊದಲು ಭಾರತ ಮೈತ್ರಿಕೂಟದ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರದ ವಿವಿಧ ಸಂಸ್ಥೆಗಳಿಂದ ಹೆಚ್ಚಿನ ದಾಳಿಗೆ ಮೈತ್ರಿ ನಾಯಕರು ಸಿದ್ಧರಾಗಿರಬೇಕು ಎಂದು ಎಚ್ಚರಿಸಿದ್ದಾರೆ. "ಈ ಸರ್ಕಾರದ (ಬೆಜಿಪಿ) ಸೇಡಿನ ರಾಜಕಾರಣದಿಂದಾಗಿ ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ದಾಳಿಗಳು, ಹೆಚ್ಚಿನ ರೈಡ್ಗಳು ಮತ್ತು ಬಂಧನಗಳಿಗೆ ನಾವು ಸಿದ್ಧರಾಗಿರಬೇಕು. ನಮ್ಮ ಮೈತ್ರಿ ಹೆಚ್ಚು ಬಲಿಷ್ಠವಾಗುತ್ತಿದ್ದಂತೆ, ಬಿಜೆಪಿ ಸರ್ಕಾರವು ನಮ್ಮ ನಾಯಕರ ವಿರುದ್ಧ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತದೆ. ಮಹಾರಾಷ್ಟ್ರದಲ್ಲಿ ಅದೇ ರೀತಿ ಮಾಡಿದೆ. ರಾಜಸ್ಥಾನ, ಬಂಗಾಳ, ವಾಸ್ತವವಾಗಿ ಕಳೆದ ವಾರ ಜಾರ್ಖಂಡ್ ಮತ್ತು ಛತ್ತೀಸ್‌ಗಢದಲ್ಲಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.ಕಳೆದ 9 ವರ್ಷಗಳಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಹರಡಿದ ಕೋಮು ವಿಷವು ಈಗ ಅಮಾಯಕ ರೈಲು ಪ್ರಯಾಣಿಕರು ಮತ್ತು ಮುಗ್ಧ ಶಾಲಾ ಮಕ್ಕಳ ಮೇಲಿನ ದ್ವೇಷದ ಅಪರಾಧಗಳಲ್ಲಿ ಕಂಡುಬರುತ್ತದೆ " ಎಂದು ಖರ್ಗೆ ಹೇಳಿದ್ದಾರೆ.ಮುಂದಿನ ಲೋಕಸಭೆ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸುವ ಉದ್ದೇಶದಿಂದ ವಿರೋಧ ಪಕ್ಷಗಳ ಭಾರತ ಮೈತ್ರಿಕೂಟದ ಮೂರನೇ ಔಪಚಾರಿಕ ಸಭೆ ಶುಕ್ರವಾರ ಆರಂಭವಾಗಿದೆ. ಜಂಟಿ ವಿರೋಧ ಪಕ್ಷದ ಮೊದಲ ಸಭೆ ಜೂನ್ 23 ರಂದು ಪಾಟ್ನಾದಲ್ಲಿ ಮತ್ತು ಎರಡನೇ ಸಭೆ ಜುಲೈ 17-18 ರಂದು ಬೆಂಗಳೂರಿನಲ್ಲಿ ನಡೆದಿತ್ತು.

Post a Comment