Sanatana Dharma: ಉದಯನಿಧಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ! ಮಾಜಿ ಹೈಕೋರ್ಟ್​ ಜಡ್ಜ್​ಗಳು ಸೇರಿ 262 ಗಣ್ಯರಿಂದ ಸಿಜೆಐಗೆ ಪತ್ರ


  ಉದಯನಿಧಿ ವಿರುದ್ಧ ಸಿಜೆಐಗೆ ಪತ್ರ

ನವದೆಹಲಿ: ಸನಾತನ ಧರ್ಮದ (Sanatana Dharma) ನಿರ್ಮೂಲನೆ ಮಾಡಬೇಕೆಂಬ ಹೇಳಿಕೆ ನೀಡಿರುವ ತಮಿಳುನಾಡು ಸಚಿವ (Tamil Nadu Minister) ಉದಯನಿಧಿ ಸ್ಟಾಲಿನ್ (Udayanidhi Stalin) ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಲವು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳು, ಉನ್ನತಾಧಿಕಾರಿಗಳು ಸೇರಿದಂತೆ ಒಟ್ಟು 262 ಮಂದಿ ಗಣ್ಯರು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. ಉದಯನಿಧಿ ಕಾಮೆಂಟ್‌ಗಳು ನೀಡಿರುವ ಹೇಳಿಕೆ ಅನುಚಿತವಾಗಿದೆ. ದೇಶದ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಇರುವ ಜನರ ವಿರುದ್ಧ ಅವರು ಮಾತನಾಡಿದ್ದಾರೆ. ಅವರ ವಿರುದ್ಧ ಸ್ವಯಂಪ್ರೇರಿಕ ಕ್ರಮ ತೆಗೆದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ. ಪತ್ರ ಬರೆದವರಲ್ಲಿ 14 ಮಾಜಿ ನ್ಯಾಯಾದೀಶರು ಸಿಜೆಐ ಡಿವೈ ಚಂದ್ರಚೂಡ್ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡಿದವರಲ್ಲಿ 14 ಮಾಜಿ ನ್ಯಾಯಾಧೀಶರು, 20 ಕ್ಕೂ ಹೆಚ್ಚು ವಿದೇಶಿ ಸೇವಾ ಅಧಿಕಾರಿಗಳು ಮತ್ತು ರಾಯಭಾರಿಗಳು ಮತ್ತು 118 ನಿವೃತ್ತ ಸೇನಾ ಅಧಿಕಾರಿಗಳು ಹಾಗೂ 130 ನಿವೃತ್ತ ಅಧಿಕಾರಿಗಳು ಸೇರಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶರಿಗೆ ಬರೆದ ಪತ್ರದಲ್ಲಿ ಉದಯನಿಧಿ ಸ್ಟಾಲಿನ್ ಮಾಡಿರುವ ಟೀಕೆಗಳು ದ್ವೇಷ ಭಾಷಣದ ವ್ಯಾಪ್ತಿಯಲ್ಲಿ ಬರುತ್ತವೆ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ವೈಷಮ್ಯವನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಹೇಳಲಾಗಿದೆ. ಕ್ರಮ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆ ದೇಶದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ಉದಯನಿಧಿ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲ ಗಣ್ಯರು ಮುಖ್ಯ ನ್ಯಾಯಮೂರ್ತಿಗಳನ್ನು ಕೋರಿದ್ದಾರೆ. ಅತ್ಯಂತ ಗಂಭೀರ ವಿಷಯವಾಗಿರುವುದರಿಂದ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಅದು ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಬರಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಜೊತೆಗೆ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ತಮಿಳುನಾಡು ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸುಮೋಟೋ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ. ನ್ಯಾಯವನ್ನು ರಕ್ಷಿಸಲು ತಮ್ಮ ಮನವಿಯನ್ನು ಸ್ವೀಕರಿಸಲಾಗುವುದು ಎಂದು ತಾವೆಲ್ಲರೂ ಭಾವಿಸುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ. ಉದಯನಿಧಿ ನೀಡಿರುವ ಹೇಳಿಕೆಗಳು ಸಾಮಾನ್ಯ ನಾಗರಿಕರ ಅದರಲ್ಲೂ ಸನಾತನ ಧರ್ಮದಲ್ಲಿ ನಂಬಿಕೆ ಇರುವವರ ಹೃದಯ ಮತ್ತು ಮನಸ್ಸಿನಲ್ಲಿ ತಲ್ಲಣ ಮೂಡಿಸಿವೆ. ಜೊತೆಗೆ ಇಂತಹ ಹೇಳಿಕೆಗಳು ಕೋಮು ಸೌಹಾರ್ದತೆ ಮತ್ತು ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೇಳಲಾಗಿದೆ. ಉದಯನಿಧಿ ಮನೆಗೆ ಬಿಗಿ ಭದ್ರತೆ ಬೆದರಿಕೆ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ನಿವಾಸಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕಳೆದ ವಾರ ಚೆನ್ನೈನಲ್ಲಿ ನಡೆದ ತಮಿಳುನಾಡಿನ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿದ್ದ ಉದಯನಿಧಿ ಸ್ಟಾಲಿನ್ ಮಾತನಾಡಿ, ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಮಹಿಳೆಯರ ತಾರತಮ್ಯಕ್ಕೆ ಕಾರಣವಾಗಿದೆ. ಆದ್ದರಿಂದ ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದರ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರೆ ನೀಡಿದ್ದರು.ನವದೆಹಲಿ: ಸನಾತನ ಧರ್ಮದ (Sanatana Dharma) ನಿರ್ಮೂಲನೆ ಮಾಡಬೇಕೆಂಬ ಹೇಳಿಕೆ ನೀಡಿರುವ ತಮಿಳುನಾಡು ಸಚಿವ (Tamil Nadu Minister) ಉದಯನಿಧಿ ಸ್ಟಾಲಿನ್ (Udayanidhi Stalin) ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಲವು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳು, ಉನ್ನತಾಧಿಕಾರಿಗಳು ಸೇರಿದಂತೆ ಒಟ್ಟು 262 ಮಂದಿ ಗಣ್ಯರು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. ಉದಯನಿಧಿ ಕಾಮೆಂಟ್‌ಗಳು ನೀಡಿರುವ ಹೇಳಿಕೆ ಅನುಚಿತವಾಗಿದೆ. ದೇಶದ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಇರುವ ಜನರ ವಿರುದ್ಧ ಅವರು ಮಾತನಾಡಿದ್ದಾರೆ. ಅವರ ವಿರುದ್ಧ ಸ್ವಯಂಪ್ರೇರಿಕ ಕ್ರಮ ತೆಗೆದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ.ಪತ್ರ ಬರೆದವರಲ್ಲಿ 14 ಮಾಜಿ ನ್ಯಾಯಾದೀಶರುಸಿಜೆಐ ಡಿವೈ ಚಂದ್ರಚೂಡ್ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡಿದವರಲ್ಲಿ 14 ಮಾಜಿ ನ್ಯಾಯಾಧೀಶರು, 20 ಕ್ಕೂ ಹೆಚ್ಚು ವಿದೇಶಿ ಸೇವಾ ಅಧಿಕಾರಿಗಳು ಮತ್ತು ರಾಯಭಾರಿಗಳು ಮತ್ತು 118 ನಿವೃತ್ತ ಸೇನಾ ಅಧಿಕಾರಿಗಳು ಹಾಗೂ 130 ನಿವೃತ್ತ ಅಧಿಕಾರಿಗಳು ಸೇರಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶರಿಗೆ ಬರೆದ ಪತ್ರದಲ್ಲಿ ಉದಯನಿಧಿ ಸ್ಟಾಲಿನ್ ಮಾಡಿರುವ ಟೀಕೆಗಳು ದ್ವೇಷ ಭಾಷಣದ ವ್ಯಾಪ್ತಿಯಲ್ಲಿ ಬರುತ್ತವೆ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ವೈಷಮ್ಯವನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಹೇಳಲಾಗಿದೆ.ಇದನ್ನೂ ಓದಿ: Udayanidhi: ಸ್ಟಾಲಿನ್ ಪುತ್ರನ ತಲೆ ತಂದರೆ 10 ಕೋಟಿ ಬಹುಮಾನ! ಅಯೋಧ್ಯೆ ಸ್ವಾಮೀಜಿ ಘೋಷಣೆಗೆ ಉದಯನಿಧಿ ಹೇಳಿದ್ದೇನು?ಕ್ರಮ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆದೇಶದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ಉದಯನಿಧಿ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲ ಗಣ್ಯರು ಮುಖ್ಯ ನ್ಯಾಯಮೂರ್ತಿಗಳನ್ನು ಕೋರಿದ್ದಾರೆ. ಅತ್ಯಂತ ಗಂಭೀರ ವಿಷಯವಾಗಿರುವುದರಿಂದ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ಅದು ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಬರಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಜೊತೆಗೆ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ತಮಿಳುನಾಡು ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸುಮೋಟೋ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ. ನ್ಯಾಯವನ್ನು ರಕ್ಷಿಸಲು ತಮ್ಮ ಮನವಿಯನ್ನು ಸ್ವೀಕರಿಸಲಾಗುವುದು ಎಂದು ತಾವೆಲ್ಲರೂ ಭಾವಿಸುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.ಉದಯನಿಧಿ ನೀಡಿರುವ ಹೇಳಿಕೆಗಳು ಸಾಮಾನ್ಯ ನಾಗರಿಕರ ಅದರಲ್ಲೂ ಸನಾತನ ಧರ್ಮದಲ್ಲಿ ನಂಬಿಕೆ ಇರುವವರ ಹೃದಯ ಮತ್ತು ಮನಸ್ಸಿನಲ್ಲಿ ತಲ್ಲಣ ಮೂಡಿಸಿವೆ. ಜೊತೆಗೆ ಇಂತಹ ಹೇಳಿಕೆಗಳು ಕೋಮು ಸೌಹಾರ್ದತೆ ಮತ್ತು ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೇಳಲಾಗಿದೆ. ಉದಯನಿಧಿ ಮನೆಗೆ ಬಿಗಿ ಭದ್ರತೆಬೆದರಿಕೆ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ನಿವಾಸಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕಳೆದ ವಾರ ಚೆನ್ನೈನಲ್ಲಿ ನಡೆದ ತಮಿಳುನಾಡಿನ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿದ್ದ ಉದಯನಿಧಿ ಸ್ಟಾಲಿನ್ ಮಾತನಾಡಿ, ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಮಹಿಳೆಯರ ತಾರತಮ್ಯಕ್ಕೆ ಕಾರಣವಾಗಿದೆ. ಆದ್ದರಿಂದ ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದರ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರೆ ನೀಡಿದ್ದರು.

Post a Comment

Previous Post Next Post