ಸೋನಿಯಾ ಗಾಂಧಿ, ಕಾಂಗ್ರೆಸ್ ಅಧಿನಾಯಕಿ
Sonia Gandhi Health: ಸೋನಿಯಾ ಗಾಂಧಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದು. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆನವದೆಹಲಿ: ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಕಾಂಗ್ರೆಸ್ ಅಧಿನಾಯಕಿ, ಕಾಂಗ್ರೆಸ್ (Congress) ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಘು ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಸೋನಿಯಾ ಗಾಂಧಿ ಅವರ ಆರೋಗ್ಯಸ್ಥಿತಿ ಸ್ಥಿರವಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.ಇದನ್ನೂ ಓದಿ: Sanathan Dharma: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ, ಅದನ್ನು ನಿರ್ಮೂಲನೆ ಮಾಡಬೇಕು; ಖ್ಯಾತ ನಟನಿಂದ ವಿವಾದ!ಸೋನಿಯಾ ಗಾಂಧಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದು. ಸದ್ಯ ಅವರು ಆರೋಗ್ಯವಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.ಆಗಸ್ಟ್ 31-ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆದ ವಿರೋಧ ಪಕ್ಷಗಳ ಒಕ್ಕೂಟದ ‘ಇಂಡಿಯಾ’ ಸಭೆಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರು ತಮ್ಮ ಮಗ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಅಲ್ಲಿಗೆ ಬಂದಿದ್ದರು. ಇತ್ತೀಚೆಗೆ ಅವರು ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಸಂಬಂಧ ಶರ್ಮಿಳಾ ಜೊತೆ ಚರ್ಚೆ ನಡೆಸಿದ್ದರು.ಕಳೆದ ಜುಲೈನಲ್ಲಿ, ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿಯವರ ಫೋಟೋವನ್ನು ಇನ್ಸ್‌ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. ಆ ಫೋಟೋದಲ್ಲಿ, ಸೋನಿಯಾ ಗಾಂಧಿಯವರು ತಾವು ಚಲಿಸುತ್ತಿದ್ದ ವಿಮಾನವು ತಾಂತ್ರಿಕ ದೋಷದಿಂದಾಗಿ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದಾಗ ಆಕ್ಸಿಜನ್ ಮುಖವಾಡವನ್ನು ಧರಿಸಿರುವುದು ಕಂಡುಬಂದಿತ್ತು. ‘ಇಂಡಿಯಾ’ ಮೈತ್ರಿಕೂಟದ ನಾಯಕರು ಭಾಗವಹಿಸಿದ್ದ ಎರಡು ದಿನಗಳ ಚಿಂತನ-ಮಂಥನ ಅಧಿವೇಶನದ ನಂತರ ವಿಮಾನವು ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿತ್ತು.ಇದನ್ನೂ ಓದಿ: 200 Trains Cancelled: G-20 ಶೃಂಗಸಭೆ ಎಫೆಕ್ಟ್, ದೇಶಾದ್ಯಂತ 200ಕ್ಕೂ ಹೆಚ್ಚು ರೈಲುಗಳು ರದ್ದು! ವಿವರ ಹೀಗಿದೆಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮೊದಲು ಸೋನಿಯಾ ಗಾಂಧಿ ಅವರ ಬಳಿಗೆ ತೆರಳಿ ಆರೋಗ್ಯವನ್ನು ವಿಚಾರಿಸಿದ್ದರು. 76ರ ಹರೆಯದ ಸೋನಿಯಾ ಗಾಂಧಿ ಅವರು ತಾನು ಚೆನ್ನಾಗಿಯೇ ಇದ್ದೇನೆ ಎಂದು ಪ್ರಧಾನಿ ಮೋದಿಗೆ ಹೇಳಿದ್ದರು. ಇನ್ನು, ಈ ವರ್ಷದ ಆರಂಭದಲ್ಲಿ ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಈ ವರ್ಷದ ಜನವರಿ 12 ರಂದು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Post a Comment