ಯತ್ನಾಳ್ ಕಿಡಿ
ರಾಮಜನ್ಮಭೂಮಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್ ಮಾಡುತ್ತಿರುವ ಹುಬ್ಬಳ್ಳಿ ಪೊಲೀಸರ ಕ್ರಮಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ (Rama janmabhoomi fighters) ಮೇಲಿನ ಕೇಸ್ ರೀ ಓಪನ್ ಮಾಡುತ್ತಿರುವ ಹುಬ್ಬಳ್ಳಿ ಪೊಲೀಸರ (Hubballi police) ಕ್ರಮಕ್ಕೆ ಬಿಜೆಪಿ ನಾಯಕರು (BJP leaders) ಕಿಡಿಕಾರಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ (R Ashok), ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯತ್ನಾಳ್, ಕಾಂಗ್ರೆಸ್ ಸರ್ಕಾರ (Congress government) ಹಿಂದೂ ವಿರೋಧಿ (Anti Hindu) ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದಿದ್ದಾರೆ. ರಾಮ ಜನ್ಮಭೂಮಿ ಪ್ರಾಣಪ್ರತಿಷ್ಠಾಪನೆಯ ದಿನಾಂಕ ನಿಗದಿಯಾದ ಮೇಲೆ ಈ ಕ್ರಮ ಕೈಗೊಂಡಿರುವುದು ಹಾಗೂ ವಿಶೇಷ ತಂಡ ರಚಿಸಿ ಬಂಧಿಸಲು ಹೊರಟಿರುವುದು ಹೇಯ ಹಾಗೂ ಖಂಡನೀಯ ಅಂತ ಕಿಡಿಕಾರಿದ್ದಾರೆ.ರಾಜ್ಯ ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶಸಂಬಂಧಿತ ಸುದ್ದಿಲಕ್ಷಾಂತರ ಮಂದಿ ದಕ್ಷಿಣ ಕೊರಿಯನ್ನರ ಪಾಲಿಗೆ ಅಯೋಧ್ಯೆಯೇ ಮಾತೃಭೂಮಿ, ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿMysuru: ಅಯೋಧ್ಯೆ ಶ್ರೀ ರಾಮನ ನೆಪದಲ್ಲಿ ಮೈಸೂರಿನ ಈ ಪುಟ್ಟ ಗ್ರಾಮದಲ್ಲಿ ಖುಷಿಯೋ ಖುಷಿ!Siddaramaiah: ಹುಬ್ಬಳ್ಳಿ ಕರಸೇವಕರ ಬಂಧನ; ತಪ್ಪು ಮಾಡಿದವರನ್ನು ಬಿಟ್ಟು ಬಿಡಬೇಕಾ? ಸಿಎಂ ಪ್ರಶ್ನೆArun Yogiraj: ಅಯೋಧ್ಯೆ ಬಾಲರಾಮನ ವಿಗ್ರಹ ಮಾತ್ರವಲ್ಲ, ಈ ಪ್ರತಿಮೆಗಳ ಹಿಂದೆಯೂ ಅರುಣ್ ಯೋಗಿರಾಜ್ ಕೈಚಳಕ!ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇಡೀ ವಿಶ್ವವೇ ಅಯೋಧ್ಯೆಯತ್ತ ತಿರುಗಿ ನೋಡುತ್ತಿರುವ ಸಂದರ್ಭದಲ್ಲಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರ 31 ವರ್ಷಗಳ ಹಳೆಯ ಪ್ರಕರಣಕ್ಕೆ ಜೀವ ನೀಡುವ ಮೂಲಕ ತಾನು ಹಿಂದೂ ವಿರೋಧಿ ಎಂದು ಸಾಬೀತುಪಡಿಸಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದೊಂದು ಹೇಯ ಕೃತ್ಯಅಸಲಿಗೆ ಮೂರು ದಶಕಗಳ ಕಾಲ ಸುಮ್ಮನಿದ್ದು, ಈಗ ರಾಮ ಜನ್ಮಭೂಮಿ ಪ್ರಾಣಪ್ರತಿಷ್ಠಾಪನೆಯ ದಿನಾಂಕ ನಿಗದಿಯಾದ ಮೇಲೆ ಈ ಕ್ರಮ ಕೈಗೊಂಡಿರುವುದು ಹಾಗೂ ವಿಶೇಷ ತಂಡ ರಚಿಸಿ ಬಂಧಿಸಲು ಹೊರಟಿರುವುದು ಹೇಯ ಹಾಗೂ ಖಂಡನೀಯ ಅಂತ ಯತ್ನಾಳ್ ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: Ram Mandir: ಒಂದೆಡೆ ರಾಮ ಬರ್ತಿರೋ ಸಂಭ್ರಮ; ಹುಬ್ಬಳ್ಳಿಯಲ್ಲಿ ಮಾತ್ರ 31 ವರ್ಷ ಹಳೇ ಕೇಸ್‌ಗೆ ಜೀವ! ಒಬ್ಬ ಬಂಧನ, ಕರಸೇವಕರೇ ಟಾರ್ಗೆಟ್!ಇದು ರಾಮಭಕ್ತರಿಗೆ ಮಾಡುವ ಅಪಮಾನಆದ್ಯತಾ ಪಟ್ಟಿಯನ್ನಿಟ್ಟುಕೊಂಡು ಕೆಲಸ ಮಾಡಬೇಕಾದ ಪೊಲೀಸರು, ನಿರ್ಜೀವ ಪ್ರಕರಣಕ್ಕೆ ವಿಶೇಷ ತಂಡ ರಚಿಸಿರುವುದು ಹಾಸ್ಯಾಸ್ಪದವಾಗಿದೆ. ಬಾಹ್ಯ ಹಾಗೂ ಆಂತರಿಕ ಶತ್ರುಗಳನ್ನು ಮಟ್ಟ ಹಾಕಬೇಕಾದ ಪೊಲೀಸರು ರಾಮ ಭಕ್ತರ ಮೇಲೆ ತಮ್ಮ ಲಾಠಿ ಪ್ರಹಾರ ಮಾಡುವುದು ರಾಮ ಭಕ್ತರಿಗೆ ಮಾಡುವ ಅವಮಾನ ಅಂತ ಯತ್ನಾಳ್ ಆರೋಪಿಸಿದ್ದಾರೆ.ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣ1992 ರಲ್ಲಿ ಕರಸೇವಕರಾಗಿ ಶ್ರೀ ರಾಮ ದೇವರ ಸೇವೆ ಮಾಡಿದ ಭಕ್ತರಿಗೆ, ಕಾರ್ಯಕರ್ತರಿಗೆ ಈಗ ನೋಟೀಸ್ ನೀಡಿ ಹುಬ್ಬಳ್ಳಿ ಪೊಲೀಸರು ಬಂಧನ ಮಾಡುವುದಾಗಿ ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಸೇಡಿನ ರಾಜಕಾರಣ ತೋರಿಸುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರನ್ನು ವಿ.ಐ.ಪಿ ಪ್ರಕರಣಗಳ ಹುಡುಕಾಟಕ್ಕೆ ನಿಯೋಜಿಸಿರುವ ಗೃಹ ಇಲಾಖೆಯ ಕ್ರಮ ಖಂಡನೀಯ ಅಂತ ಯತ್ನಾಳ್ ಟ್ವೀಟ್ ಮಾಡಿದ್ದಾರೆ.

Post a Comment