ಲೋಕಸಭಾ ಚುನಾವಣೆ-2024
ಇಂದು ಬೊಂಬೆನಗರಿ ಚನ್ನಪಟ್ಟಣಕ್ಕೆ ಅಮಿತ್ ಶಾ ಎಂಟ್ರಿ ನೀಡಲಿದ್ದು, ಅಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಅಮಿತ್ ಶಾ ಎಂಟ್ರಿಯಿಂದ ಡಿಕೆ ಬ್ರದರ್ಸ್ ಭದ್ರಕೋಟೆ ಮತ್ತೆ ಮೆರುಗು ಪಡೆಯಲಿದೆ.ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಕೌಂಡ್‌ಡೌನ್ ಶುರುವಾಗಿದೆ. ಚುನಾವಣೆಯಲ್ಲಿ ಗೆಲ್ಲಲು ಈ ಬಾರಿ ಎಲ್ಲಾ ಪಕ್ಷಗಳು ತಂತ್ರಗಾರಿಕೆಯನ್ನು ಮಾಡುತ್ತಿದೆ. ಈತನ್ಮಧ್ಯೆ ಕರ್ನಾಟಕದಲ್ಲಿ 28 ಸ್ಥಾನಗಳನ್ನೂ ಗೆಲ್ಲಬೇಕು ಎಂದು ಬಿಜೆಪಿ (Karnataka BJP) ಪ್ರಯತ್ನ ಮಾಡುತ್ತಿದ್ದು, ಇದರ ಭಾಗವಾಗಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.ಇಂದು ಬೊಂಬೆನಗರಿ ಚನ್ನಪಟ್ಟಣಕ್ಕೆ ಅಮಿತ್ ಶಾ ಎಂಟ್ರಿ ನೀಡಲಿದ್ದು, ಅಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಅಮಿತ್ ಶಾ ಎಂಟ್ರಿಯಿಂದ ಡಿಕೆ ಬ್ರದರ್ಸ್ ಭದ್ರಕೋಟೆ ಮತ್ತೆ ಮೆರುಗು ಪಡೆಯಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಪರ ಚನ್ನಪಟ್ಟಣದಲ್ಲಿ ಅಮಿತ್ ಶಾ ಬೃಹತ್ ರೋಡ್ ಶೋ ನಡೆಸಲಿದ್ದು, ಆ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಗೆಲುವಿಗೆ ಷರಾ ಬರೆಯಲಿದ್ದಾರೆ. ಸಂಬಂಧಿತ ಸುದ್ದಿವಿವಿಪ್ಯಾಟ್ ಸ್ಲಿಪ್ ಎಣಿಸುವ ಮೂಲಕ ಫಲಿತಾಂಶ ತಿಳಿಯುತ್ತಾ? ಚುನಾವಣಾ ಆಯೋಗಕ್ಕೆ ಸುಪ್ರೀಂ ಪ್ರಶ್ನೆ!ಬಿಜೆಪಿ-ಜೆಡಿಎಸ್ ಮಧ್ಯೆ ಇನ್ನೂ ಮೂಡದ ಒಮ್ಮತ, ಇಂದು ದ್ವಿಪಕ್ಷ ನಾಯಕರ ಜೊತೆ ಅಮಿತ್ ಶಾ ಬ್ರೇಕ್‌ಫಾಸ್ಟ್ ಸಭೆಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್ ಶಾಕ್, 800 ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ!ರಾಜ್ಯದಲ್ಲಿಂದು ಅಮಿತ್ ಶಾ ಚುನಾವಣಾ ರಣಕಹಳೆ, ಬಂಡಾಯವೆದ್ದವರಿಗೂ ಮದ್ದರೆಯುತ್ತಾರಾ ಬಿಜೆಪಿ ಚಾಣಕ್ಯ?ಇದನ್ನೂ ಓದಿ: Lok Sabha Election: ರಾಜ್ಯದಲ್ಲಿಂದು ಅಮಿತ್ ಶಾ ಚುನಾವಣಾ ರಣಕಹಳೆ, ಬಂಡಾಯವೆದ್ದವರಿಗೂ ಮದ್ದರೆಯುತ್ತಾರಾ ಬಿಜೆಪಿ ಚಾಣಕ್ಯ?ಇಂದು ಸಂಜೆ.5:40ಕ್ಕೆ ಹೆಲಿಕಾಪ್ಟರ್ ಮೂಲಕ ಚನ್ನಪಟ್ಟಣಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಾಲೂಕಿನ ಶೆಟ್ಟಿಹಳ್ಳಿಗೆ ಹೆಲಿಪ್ಯಾಡ್‌ನಲ್ಲಿ ಇಳಿದು ಸಂಜೆ 6 ಗಂಟೆಗೆ ಸರಿಯಾಗಿ ರಸ್ತೆ ಮೂಲಕ ಚಿಕ್ಕಮಳೂರು ಗ್ರಾಮಕ್ಕೆ ಆಗಮಿಸಲಿದ್ದಾರೆ. ಸಂಜೆ 6.05 ಕ್ಕೆ ಚಿಕ್ಕಮಳೂರು ಗ್ರಾಮದಿಂದ ರೋಡ್ ಶೋ ಆರಂಭವಾಗಲಿದ್ದು, ಚನ್ನಪಟ್ಟಣದ ಗಾಂಧಿ ವೃತ್ತದವರೆಗೆ ಸುಮಾರು 2 ಕಿ.ಮೀ ವರೆಗೆ ಬೃಹತ್ ರೋಡ್ ಶೋ ನಡೆಯಲಿದೆ. ಆ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮೈತ್ರಿ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಂಡಿದೆ. ಇನ್ನು, ರಾತ್ರಿ 7 ಕ್ಕೆ ರೋಡ್ ಶೋ ಮುಕ್ತಾಯವಾಗಿ ನಂತರ ಬೃಹತ್ ವೇದಿಕೆಯಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದ್ದು, ಅಲ್ಲಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿರುವ ಅಮಿತ್ ಶಾ ನಂತರ ರಾತ್ರಿ 7.15 ಕ್ಕೆ ಶೆಟ್ಟಿಹಳ್ಳಿ ಹೆಲಿಪ್ಯಾಡ್‌ಗೆ ವಾಪಸ್ಸ್ ಆಗಲಿದ್ದಾರೆ. ರೋಡ್ ಶೋ ನಲ್ಲಿ ಅಭ್ಯರ್ಥಿ ಡಾ.ಮಂಜುನಾಥ್ ಸೇರಿ ರಾಜ್ಯಮಟ್ಟದ ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರನ್ನ ಸೇರಿಸಲು ಪ್ಲಾನ್ ರೂಪಿಸಲಾಗಿದೆ.ಇಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದು, ಈ ಸಭೆಯಲ್ಲಿ ಎರಡೂ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ಮಧ್ಯೆ ಸಮನ್ವಯ ತರುವ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಹಲವು ಕಡೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರ ಮಧ್ಯೆ ಭಿನ್ನಾಭಿಪ್ರಾಯವಿದ್ದು, ಇದನ್ನು ಬಗೆ ಹರಿಸಲು ಅಮಿತ್ ಶಾ ಸಲಹೆಗಳನ್ನು ನೀಡಲಿದ್ದಾರೆ.ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸ್ವಾಗತಿಸಿದ್ದರು. ಸದ್ಯ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅಮಿತ್ ಶಾ ಅವರು ಬೆಳಿಗ್ಗೆ 9.30ಕ್ಕೆ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ.ಇದನ್ನೂ ಓದಿ: Lok Sabha Election: ಈ ಬಾರಿ ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಮ್ಮ ಬೆಂಬಲ; ಪ್ರಭಾವಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಘೋಷಣೆ!ಇನ್ನು ಮುಖ್ಯವಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲೋಕಸಭೆ ವಿಚಾರವಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದ್ದು, ಬಂಡಾಯವೆದ್ದ ನಾಯಕರನ್ನು ಕರೆದು ಬಂಡಾಯ ಶಮನ ಮಾಡುವ ಸಾಧ್ಯತೆ ಇದೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯ ಹಿನ್ನೆಲೆ ರೆಬೆಲ್ ಆಗಿರುವ ಮಾಜಿ ಶಾಶಕ ರೇಣುಕಾಚಾರ್ಯ ಮತ್ತು ತಂಡಕ್ಕೆ ಅಮಿತ್ ಶಾ ಸಭೆಗೆ ಬರುವಂತೆ ರಾಧಾ ಮೋಹನ್ ದಾಸ್ ಅಗರವಾಲಾ ಸೂಚನೆ ನೀಡಿದ್ದು, ಹೀಗಾಗಿ ಇಂದು ಅಮಿತ್ ಶಾ ಕರೆದಿರುವ ಸಭೆಯಲ್ಲಿ ಭಾಗಿಯಾಗಲಿರುವ ರೇಣುಕಚಾರ್ಯ ಅಂಡ್ ಟೀಮ್ ತಮ್ಮ ಅಳಲನ್ನು ತೋಡಿಕೊಳ್ಳಲಿದ್ದಾರೆ.ದಾವಣಗೆರೆಯ ಹಾಲಿ ಸಂಸದ ಜಿಎಂ ಸಿದ್ದೇಶ್ವರ ಪತ್ನಿ ಗಾಯಿತ್ರಿ ಸಿದ್ದೇಶ್ವರ್‌ಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಬಂಡಾಯದ ನಡೆ ತೋರಿದ್ದ ರೇಣುಕಾಚಾರ್ಯ ಮತ್ತು ಅನೇಕ ನಾಯಕರು ಕೂಡಲೇ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸುವಂತೆ ಆಗ್ರಹಿಸಿದ್ದರು. ಆದರೆ ರಾಜ್ಯ ಬಿಜೆಪಿ ನಾಯಕರ ಸಹಿತ ಯಾರೂ ಇವರ ಮನವಿಯನ್ನು ಪರಿಗಣನೆಗೆ ತೆಗೆದುಕೊಂಡಿರಲಿಲ್ಲ.

Post a Comment