ಸಿಎಂ ಕುರ್ಚಿ ಮೇಲೆ ಕಾಂಗ್ರೆಸ್ ಹಿರಿಯ ನಾಯಕನ ಕಣ್ಣು
ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ತೀವ್ರ ಸಂಚಲನ ಮೂಡಿಸಿರುವ ಬೆನ್ನಲ್ಲೆ ಮುಖ್ಯಮಂತ್ರಿಯ ಬದಲಾವಣೆ ಕೂಗು ಕೂಡ ಜೋರಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಂಚೂಣಿಯಲ್ಲಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ (Muda Scam) ತೀವ್ರ ಸಂಚಲನ ಮೂಡಿಸಿರುವ ಬೆನ್ನಲ್ಲೆ ಮುಖ್ಯಮಂತ್ರಿ (CM) ಬದಲಾವಣೆ ಕೂಗು ಕೂಡ ಜೋರಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮುಂಚೂಣಿಯಲ್ಲಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇದರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ (Satish Jarakiholi), ಸಚಿವ ಎಂಬಿ ಪಾಟೀಲ (MB Patil) ಹಾಗೂ ಗೃಹ ಸಚಿವ ಪರಮೇಶ್ವರ್ (Parameshwar) ಈಗಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಇದೀಗ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್‌ವಿ ದೇಶಪಾಂಡೆ (RV Deshapane) ಕೂಡ ಸಿಎಂ ರೇಸ್‌ನಲ್ಲಿ ತಾವು ಇರುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎನ್ನುತ್ತಲೇ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಫೋನ್ ಟ್ಯಾಪಿಂಗ್ ಆರೋಪ ಬಂದ ತಕ್ಷಣ ರಾಮಕೃಷ್ಣ ಹೆಗೆಡೆ ಅವರು ರಾಜೀನಾಮೆ ನೀಡಿದ್ರು, ಈಗ ದಿನ ಫೋನ್ ಟ್ಯಾಪಿಂಗ್ ನಡೀತಾ ಇದೆ. ಈಗ ಮೌಲ್ಯಾಧಾರಿತ ರಾಜಕಾರಣ ನಡೆಯುತ್ತಿಲ್ಲ ಎನ್ನುವ ಮೂಲಕ ಮೈಸೂರಿನಲ್ಲಿ ಪ್ರಸ್ತುತ ರಾಜಕಾರಣದ ಬಗ್ಗೆ ಶಾಸಕ ಆರ್.ವಿ ದೇಶಪಾಂಡೆ ಅವರು ಬೇಸರ ಹೊರಹಾಕಿದರು.
ದಾಖಲೆ ಕೊಟ್ರೆ ನಾನೇ ಸರ್ಕಾರಕ್ಕೆ ಪತ್ರ ಬರೆಯುವೆ
ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ ಎಂಬುದರ ದಾಖಲೆ ಕೊಡಿ. ಸಾವಿರಾರು ಕೋಟಿ ಹಗರಣ ಅಂಥ ಹೇಳುತ್ತಿದ್ದಾರೆ ಹಾಗಿದ್ರೆ ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Prahlad Joshi: ಸಿದ್ದರಾಮಯ್ಯ ಹುಲಿ, ಟಗರು, ಕುರಿ ಏನಾದರೂ ಇರಲಿ, ಸಿಎಂ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ
ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಟ್ರೆ ನಾನೂ ಸಿಎಂ ಆಗ್ತೀನಿ
ಹೌದು, ಸಿಎಂ ಸ್ಥಾನದ ಇಂಗಿತ ವ್ಯಕ್ತಪಡಿಸಿರುವ ದೇಶಪಾಂಡೆ ಅವರು, ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಆಸೆಯನ್ನು ಆರ್.ವಿ ದೇಶಪಾಂಡೆ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಸಚಿವ, ಶಾಸಕನಾಗಿ ದಣಿದಿದ್ದೇನೆ, ಇನ್ನೇನಿದ್ರು ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಎಲ್ಲರಿಗೂ ಸಿಎಂ ಆಗುವ ಆಸೆ ಇರುತ್ತೆ
ಹಾಗಾದ್ರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಲೈಫ್ ನಲ್ಲಿ ಆಂಭಿಷನ್ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ರು ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯನವರೇ ಇರ್ತಾರೇ. ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸದ್ಯ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನನಗೆ ಗೊತ್ತಿಲ್ಲದೆ ಯಾವುದೇ ಚರ್ಚೆ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಚಿವರ ನಿವಾಸದಲ್ಲಿ ನಡೆದ ಸಭೆ ಕೇವಲ ಇಲಾಖೆಗೆ ಸಂಬಂಧಿಸಿದ್ದು
ಗೃಹ ಸಚಿವ ಪರಮೇಶ್ವರ ಹಾಗೂ ಲೋಕೋಪಯೋಗಿ ಸಚಿವ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಕೇವಲ ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ.

Post a Comment