ಸಾಂದರ್ಭಿಕ ಚಿತ್ರ
ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧದ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ ಈ ಪ್ರಕರಣದ ತ್ವರಿತ ವಿಚಾರಣೆಗೆ ಪೊಲೀಸರು ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ತನಿಖೆಗಾಗಿ ಪ್ರತ್ಯೇಕ ಕೋರ್ಟ್ ರಚಿಸಲು ಪೊಲೀಸರು ಪ್ರಯತ್ನ ಪಟ್ಟಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ (Renukaswamy Case) ನಿನ್ನೆ (ಸೆಪ್ಟೆಂಬರ್ 4) 24ನೇ ಎಸಿಎಂಎಂ ಕೋರ್ಟ್ಗೆ ಚಾರ್ಜ್ ಶೀಟ್ (Chargesheet) ಸಲ್ಲಿಸಲಾಗಿದೆ. ಈ ಒಂದು ಚಾರ್ಜ್ ಶೀಟ್ನಲ್ಲಿ ಇಡೀ ಪ್ರಕರಣದ ಪ್ರಮುಖ, ಹಾಗೂ ಚಿಕ್ಕ ಚಿಕ್ಕ ಮಾಹಿತಿಯನ್ನು ಕೂಡಾ ಇಲ್ಲಿ ದಾಖಲಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯಿಂದ ಶುರು ಮಾಡಿದಂತೆ, ಎಫ್ಎಸ್ಎಲ್ ರಿಪೋರ್ಟ್‌ಗಳು, ವೈದ್ಯಕೀಯ ವರದಿಗಳು, ಪಂಚನಾಮೆ ಪ್ರತಿಗಳು, ಮಹಜರು ಕಾಪಿಗಳು, ಆರೋಪಿಗಳ ಹೇಳಿಕೆ ಕಾಪಿಗಳು, ಸಾಕ್ಷಿಗಳ ಹೇಳಿಕೆ, ಕಸ್ಟಡಿ ವೇಳೆ ಆರೋಪಿಗಳ ವೈದ್ಯಕೀಯ ತಪಾಸಣೆ ಪ್ರತಿಗಳು, ಸಾಕ್ಷ್ಯಾಧಾರಗಳ ಪ್ರತಿಗಳು ಸೇರಿದಂತೆ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡ 3991 ಪುಟಗಳುಳ್ಳ 9 ಸಂಪುಟಗಳ 10 ಕಡತಗಳನ್ನು ದರ್ಶನ್ ಮತ್ತು ಗ್ಯಾಂಗ್ ವಿರುದ್ಧದ ದೋಷಾರೋಪಣ ಪಟ್ಟಿಯು ಒಳಗೊಂಡಿದೆ.
ಈತನ್ಮಧ್ಯೆ ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧದ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ ಈ ಪ್ರಕರಣದ ತ್ವರಿತ ವಿಚಾರಣೆಗೆ ಪೊಲೀಸರು ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ತನಿಖೆಗಾಗಿ ಪ್ರತ್ಯೇಕ ಕೋರ್ಟ್ ರಚಿಸಲು ಪೊಲೀಸರು ಪ್ರಯತ್ನ ಪಟ್ಟಿದ್ದು, ಸ್ಪೆಷಲ್ ಕೋರ್ಟ್ ಅಥವಾ ಪಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಗೆ ಬೆಂಗಳೂರು ಪೊಲೀಸರ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದ್ದಂತೆ ಈ ಬಗ್ಗೆ ಚರ್ಚೆ ಶುರುವಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಬಿ. ದಯಾನಂದ್ ಅವರಿಂದ ಇಂದು ಚರ್ಚೆ ಆಗಲಿದೆ. ಡಿಜಿಪಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಮೂಲಕ ಪ್ರಸ್ತಾವನೆ ಮಾಡಲಿದ್ದು, ಮತ್ತೊಮ್ಮೆ ಸ್ಪೆಷಲ್ ಕೋರ್ಟ್ ಸ್ಥಾಪನೆ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಅಂದಹಾಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ವಿರುದ್ಧದ ತನಿಖೆಗೆ ಈ ಮೊದಲು ಕೂಡ ಸ್ಪೆಷಲ್ ಕೋರ್ಟ್ ಅಥವಾ ಪಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಗೆ ಪೊಲೀಸರು ಮನವಿ ಮಾಡಿದ್ದರು. ಆದ್ರೆ ಚಾರ್ಜ್ ಶೀಟ್ ಸಲ್ಲಿಕೆ ಆದ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದ್ದು, ಈ ಹಿನ್ನೆಲೆ ಈಗ ಚಾರ್ಜ್ ಶೀಟ್ ಸಲ್ಲಿಕೆ ಆಗಿರೋದ್ರಿಂದ ಸ್ಪೆಷಲ್ ಕೋರ್ಟ್ ಬಗ್ಗೆ ಪೊಲೀಸರು ಗಮನ ಹರಿಸಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ಬೆಳಗ್ಗೆ 11.10ರ ಸುಮಾರಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಾಗೇಶ್ ಅವರು 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಪ್ರಕರಣದ ತನಿಖೆಯ ಚಾರ್ಜ್‌ಶೀಟ್ ಅನ್ನು ಸಲ್ಲಿಕೆ ಮಾಡಿದ್ದರು. ಶಿರಸ್ತೇದಾರ್ ರಜೆ ಇರುವ ಕಾರಣ ನಿನ್ನೆ ಚಾರ್ಜ್‌ಶೀಟ್ ಪರಿಶೀಲನೆ ಮಾಡಿರಲಿಲ್ಲ. ಶಿರಸ್ತೇದಾರ್ ಪರಿಶೀಲನೆ ನಡೆಸಿದ ಬಳಿಕ ಪೊಲೀಸರು ಸಿಸಿ ಮಾಡಲಿದ್ದು, ಎಲ್ಲ ಪ್ರತಿಗಳು ಸಿಸಿಯಾದ ಬಳಿಕ ಆರೋಪಿಗಳಿಗೆ ಚಾರ್ಜ್ ಶೀಟ್ ಪ್ರತಿ ನೀಡಲಾಗುತ್ತದೆ. ಚಾರ್ಜ್ ಶೀಟ್ ಪ್ರತಿ ಆರೋಪಿಗಳಿಗೆ ಸಿಕ್ಕ ಬಳಿಕ ಕೋರ್ಟ್ ಕಮೀಟಲ್ ಮಾಡಲಿದ್ದು, ಕಮೀಟಲ್ ಮಾಡಿ ನ್ಯಾಯಾಲಯ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡಲಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧದ ದೋಷಾರೋಪಣ ಪಟ್ಟಿಯು ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 9 ಸಂಪುಟಗಳ 10 ಕಡತಗಳನ್ನು ಒಳಗೊಂಡಿದೆ.

Post a Comment