Muda Scam: ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಜೀವಕ್ಕೆ ಅಪಾಯ! ಭದ್ರತೆ ನೀಡುವಂತೆ ಪತ್ರ ಬರೆದ ಬಿವೈ ವಿಜಯೇಂದ್ರ


 ಸ್ನೇಹಮಯಿ ಕೃಷ್ಣ ಮತ್ತು ಸಿಎಂ ಸಿದ್ದರಾಮಯ್ಯ

ಇನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (MUDA) ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ ದೂರು ನೀಡಿದ್ದರು. ಇದೀಗ ಇವರಿಗೆ ಭದ್ರತೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರಿಂದ ಪತ್ರ ಬರೆದಿದ್ದಾರೆ.ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (MUDA) ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದ್ದು, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramahia) ಹೆಸರು ಕೇಳಿ ಬಂದಿದೆ. ಮುಡಾ ಅಕ್ರಮದಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯನವರ ಹಸ್ತಕ್ಷೇಪವಿದೆ ಎಂದು ವಿಪಕ್ಷಗಳು ಆರೋಪಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿಯವರಿಗೆ ಅರ್ಹತೆಗೂ ಮೀರಿ 2 ಕೋಟಿ ರೂಪಾಯಿ ಬೆಲೆಬಾಳುವ 14 ನಿವೇಶನಗಳನ್ನು ವಿಜಯನಗರದ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ನಿಯಮದ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ ಸಿಎಂ ಪತ್ನಿ ಹೆಸರಿಗೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಗಂಭೀರ ಆರೋಪ ಮಾಡುತ್ತಿವೆ.

ಇನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (MUDA) ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ ದೂರು ನೀಡಿದ್ದರು. ಇದೀಗ ಇವರಿಗೆ ಭದ್ರತೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರಿಂದ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:

ಭದ್ರತೆ ಕೋರಿ ಪತ್ರ ಬರೆದ ಬಿಜೆಪಿ ಅಧ್ಯಕ್ಷ 

ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣಗೆ ಭದ್ರತೆ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪತ್ರ ಬರೆದಿದ್ದಾರೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ ಆಗಿರುವ ಸ್ನೇಹಮಯಿ ಕೃಷ್ಣ ಅವರಿಗೆ ಭದ್ರತೆ ನೀಡಬೇಕೆಂದು ಕೇಳಲಾಗಿದೆ.

ಪತ್ರದಲ್ಲಿ ಏನಿದೆ?

ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣ ಬೆಳಕಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇದರಲ್ಲಿ ‘ಶ್ರೀ ಸ್ನೇಹಮಯಿ ಕೃಷ್ಣ ಮಾಹಿತಿ ಹಕ್ಕುದಾರರು ಹಾಗೂ ಹೋರಾಟಗಾರರು ಮೈಸೂರು.

ಇವರು ಅನೇಕ ದಿನಗಳಿಂದ ಕರ್ನಾಟಕ ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳು ಹಾಗೂ ವಿಶೇಷವಾಗಿ ಮೈಸೂರಿನ ಮುಡಾದ ಸೈಟ್ನಲ್ಲಿ ಆದ ಹಗರಣ ಮತ್ತು ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ದೂರು ನೀಡಿ ಈ ಪ್ರಕರಣವನ್ನು ಬೆಳಕಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

 ಆದುದರಿಂದ ಶ್ರೀ ಸ್ನೇಹಮಯಿ ಕೃಷ್ಣರವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸೂಕ್ತ ಭದ್ರತೆ ನೀಡಬೇಕಾಗಿ ತಮ್ಮಲ್ಲಿ ವಿನಂತಿಸುತ್ತೇನೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರರವರು ಪತ್ರ ಬರೆದಿದ್ದಾರೆ.

Post a Comment

Previous Post Next Post