ಚಾಮುಂಡಿ ಬೆಟ್ಟ
ಈಗಾಗಲೆ ಬ್ರಾಹ್ಮಿ ಮುಹೂರ್ತದಲ್ಲಿ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಎಲ್ಲಾ ಪೂಜಾ ಕೈಂಕರ್ಯ ಆರಂಭವಾಗಿದೆ. ಕೆಲವೇ ಕ್ಷಣಗಳಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ಆಗಲಿದ್ದು, ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುವುದು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ (Mysuru Dasara) ಇಂದು (ಅಕ್ಟೋಬರ್ 3) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 9.15 ರಿಂದ 9.45 ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ (Chamundeshwari) ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ದಸರಾ ಸಂಭ್ರಮ ಶುರುವಾಗಲಿದೆ. ಈಗಾಗಲೆ ಬ್ರಾಹ್ಮಿ ಮುಹೂರ್ತದಲ್ಲಿ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ಎಲ್ಲಾ ಪೂಜಾ ಕೈಂಕರ್ಯ ಆರಂಭವಾಗಿವೆ.
ಕೆಲವೇ ಕ್ಷಣಗಳಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ಆಗಲಿದ್ದು, ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಸಿಗಲಿದೆ. ಇಂದು ಮೊದಲ ದಿನವಾದ ಕಾರಣ ವಿಶೇಷ ಪೂಜೆ ಸಲ್ಲಿಸಲಾಗಿದ್ದು, ನಾಡಿನ ಜನತಗೆ ಸುಖ, ಶಾಂತಿ ಕೋರಿ ಪೂಜೆ ಸಲ್ಲಿಸಲಾಗಿದೆ ಎಂದು ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ಅವರು ತಿಳಿದ್ದಾರೆ.
[ಇದನ್ನೂ ಓದಿ: ಇಂದು ನವರಾತ್ರಿ ಮೊದಲ ದಿನ: ಕಳಶ ಸ್ಥಾಪನೆಯ ಮುಹೂರ್ತ, ವಿಧಿ-ವಿಧಾನ ಇಲ್ಲಿದೆ
ಉದ್ಘಾಟನೆಗೆ ವೇದಿಕೆ ಸಿದ್ಧ
ನಾಡಹಬ್ಬ ದಸರಾ 2024 ಉದ್ಘಾಟನೆ ಹಿನ್ನಲೆ ಚಾಮುಂಡಿ ಬೆಟ್ಟ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ನಾನ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ದಸರಾ ಉದ್ಘಾಟನೆಗೆ ವೇದಿಕೆ ಸಿದ್ಧಗೊಂಡಿದ್ದು, ಗಣ್ಯರು ಕೂರುವ ವೇದಿಕೆಯ ಹಿಂದೆ ಎಲ್ಇಡಿ ಅಳವಡಿಕೆ ಮಾಡಲಾಗಿದೆ. ಒಂದು ಕಡೆ ಅರ್ಜುನ ಆನೆ ಅಂಬಾರಿ ಹೊರುವ ಫೋಟೋ, ಮತ್ತೊಂದು ಕಡೆ ಚಾಮುಂಡೇಶ್ವರಿ ತಾಯಿಯ ಫೋಟೋ ಹಾಕಿ ವೇದಿಕೆ ಸಿದ್ಧಪಡಿಸಲಾಗಿದೆ. ವೇದಿಕೆಯ ಬಲಭಾಗದಲ್ಲಿ ಬೆಳ್ಳಿಯ ಲೇಪನದ ರಥ ಇಟ್ಟಿರುವ ಜಿಲ್ಲಾಡಳಿತ, 1 ಸಾವಿರ ಜನ ಕೂರುವ ಆಸನದ ವ್ಯವಸ್ಥೆ ಮಾಡಿದೆ. ಚಾಮುಂಡಿ ಬೆಟ್ಟದಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಾಗ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸಿದೆ.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ
ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಪ್ಪಾರ್ಚನೆ ಮಾಡಿ ದಸರಾಗೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಶಾಸಕ ಜಿ.ಟಿ. ದೇವೆಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.
ಆರಂಭವಾಗಲಿವೆ ಹಲವು ಕಾರ್ಯಕ್ರಮಗಳು
ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದ ನಂತರ ಚಲನಚಿತೋತ್ಸವ, ಆಹಾರಮೇಳ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ಚಿತ್ರಕಲೆ ಹಾಗೂ ಕರಕುಶಲ ಕಲೆಗಳ ಪ್ರದರ್ಶನ, ಭಾರತ್ ಸೈಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ, ರಂಗಾಯಣದಲ್ಲಿ ನವರಾತ್ರಿ ಜಾನಪದ ರಂಗೋತ್ಸವ ಹಾಗೂ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಆರಂಭಗೊಳ್ಳಲಿವೆ.ಸಾಂಸ್ಕೃತಿಕಾ ಕಾರ್ಯಕ್ರಮ ಉದ್ಘಾಟನೆ
ಸಂಜೆ 6 ಗಂಟೆಗೆ ಅರಮನೆಯ ಆವರಣದಲ್ಲಿ ನಾಡಹಬ್ಬ ಪ್ರಯುಕ್ತ ದಸರಾ ಸಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಅರಮನೆಯಲ್ಲಿ ಖಾಸಗಿ ದರ್ಬಾರ್
ನವರಾತ್ರಿ ಸಮಯದಲ್ಲಿ ಮೈಸೂರು ಅರಮನೆಯಲ್ಲಿ ಯದು ವಂಶಸ್ಥರಾದ ಯದುವೀರ್ ಒಡೆಯರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್ ಅವರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

Post a Comment