PM Modi: ಭಾರತಕ್ಕೆ ತಲೆ ನೋವಾದ ಪಶ್ಚಿಮ ಏಷ್ಯಾದ ಸಂಘರ್ಷ; ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ!


 ಪ್ರಧಾನಿ ನರೇಂದ್ರ ಮೋದಿ ಭಾರತವು ಸಂಘರ್ಷದಲ್ಲಿ ತೊಡಗಿರುವ ಎಲ್ಲಾ ಪಕ್ಷಗಳು ರಾಜತಾಂತ್ರಿಕತೆ ಮತ್ತು ಸಂವಾದದ ಮೂಲಕ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಿಕೊಳ್ಳಲು ಒತ್ತಾಯಿಸಿದೆ. ನಡೆಯುತ್ತಿರುವ ಸಂಘರ್ಷವು ‘ವಿಶಾಲವಾದ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳಬಾರದು’ ಎಂದು ಭಾರತ ಹೇಳಿದೆ ಎಂದು ವರದಿ ತಿಳಿಸಿದೆ.

 ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಪಶ್ಚಿಮ ಏಷ್ಯಾದಲ್ಲಿನ (West Asia) ಬಿಕ್ಕಟ್ಟಿನ ಕುರಿತು ಸರ್ಕಾರದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕ್ಯಾಬಿನೆಟ್ ಸಮಿತಿಯ (Cabinet Committee on Security) ತುರ್ತು ಸಭೆಯನ್ನು ಕರೆದಿದ್ದಾರೆ. ಪ್ರಧಾನಿ, ಗೃಹ ಸಚಿವರು, ರಕ್ಷಣಾ ಸಚಿವರು, ವಿದೇಶಾಂಗ ಸಚಿವರು, ಹಣಕಾಸು ಸಚಿವರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಒಳಗೊಂಡ ಸಮಿತಿಯು ಮಧ್ಯಪ್ರಾಚ್ಯದಲ್ಲಿ ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯ ನಂತರದ ತೀವ್ರ ಉಲ್ಬಣ ಮತ್ತು ಮಧ್ಯಪ್ರಾಚ್ಯದಲ್ಲಿನ ಹೊಸ ಹಗೆತನದ ಬಗ್ಗೆ ವಿವರವಾಗಿ ಚರ್ಚಿಸಿತು.ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ಸಮಿತಿಯು, ನಡೆಯುತ್ತಿರುವ ಮತ್ತು ವಿಸ್ತಾರಗೊಳ್ಳುತ್ತಿರುವ ಬಿಕ್ಕಟ್ಟಿನಿಂದ ಉದ್ಭವಿಸುವ ವಿವಿಧ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿದೆ. ಹಲವಾರು ಪ್ರಮುಖ ವಿಷಯಗಳಲ್ಲಿ, ಅವರು ವ್ಯಾಪಾರ, ಪೂರೈಕೆ ಸರಪಳಿಗಳ ಮೇಲಿನ ಪ್ರಭಾವವನ್ನು ಚರ್ಚಿಸಿದರು. ವಿಶೇಷವಾಗಿ ತೈಲ, ಪೆಟ್ರೋಲಿಯಂ ಮತ್ತು ಅದರ ಉತ್ಪನ್ನಗಳ ಪೂರೈಕೆ ಬಗ್ಗೆ ಮಾತುಕತೆ ನಡೆಡಿಸಿದ್ದಾರೆ ಎಂದು ವರದಿಯಾಗಿದೆ

ಇದನ್ನೂ ಓದಿ: ಬೈರುತ್ನ ಹಿಜ್ಬುಲ್ಲಾ ಗುಪ್ತಚರ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ದಾಳಿ; ನಸ್ರಲ್ಲಾ ಉತ್ತರಾಧಿಕಾರಿಯೇ ಟಾರ್ಗೆಟ್!

ಮಾತುಕತೆ ಮೂಲಕ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಭಾರತವು ಸಂಘರ್ಷದಲ್ಲಿ ತೊಡಗಿರುವ ಎಲ್ಲಾ ಪಕ್ಷಗಳು ರಾಜತಾಂತ್ರಿಕತೆ ಮತ್ತು ಸಂವಾದದ ಮೂಲಕ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಿಕೊಳ್ಳಲು ಒತ್ತಾಯಿಸಿದೆ. ನಡೆಯುತ್ತಿರುವ ಸಂಘರ್ಷವು ‘ವಿಶಾಲವಾದ ಪ್ರಾದೇಶಿಕ ಆಯಾಮವನ್ನು ತೆಗೆದುಕೊಳ್ಳಬಾರದು’ ಎಂದು ಭಾರತ ಹೇಳಿದೆ ಎಂದು ವರದಿ ತಿಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ಸೃಷ್ಟಿಯಾಗಿರುವ ಸಂಘರ್ಷದಿಂದ ಪೆಟ್ರೋಲಿಯಂ ಉತ್ಪನ್ನ, ವ್ಯಾಪಾರ ಮತ್ತು ಪೂರೈಕೆಯ ಮೇಲೆ ಭಾರೀ ಪ್ರಭಾವ ಬೀರುವ ಆತಂಕ ಎದುರಾಗಿದೆ ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕಡಲ ವ್ಯಾಪಾರ ಮತ್ತು ಪೂರೈಕೆ ಸರಪಳಿಗಳ ಮೇಲೆ ಪ್ರಭಾವ

ಸಂಘರ್ಷವು ಅದರ ಪಕ್ಷವಾಗಿರುವವರ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ, ಆದರೆ ಉಳಿದ ಪ್ರದೇಶ ಮತ್ತು ಪ್ರಪಂಚದ ಮೇಲೆ ಪರಿಣಾಮ ಬೀರಲಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದ ಪ್ರಮುಖವಾದ ಕೆಂಪು ಸಮುದ್ರ ಮತ್ತು ಅಡೆನ್ ಕೊಲ್ಲಿ ಮಾರ್ಗಗಳಾದ್ಯಂತ ವ್ಯಾಪಕವಾದ ವ್ಯಾಪಾರ ಅಡೆತಡೆಗಳನ್ನು ಭಾರತವು ಎದುರಿಸುತ್ತಿದೆ.ಲೆಬನಾನ್‌ನ ಇರಾನ್ ಬೆಂಬಲಿತ ಹಿಜ್ಬುಲ್ಲಾ ಉಗ್ರಗಾಮಿಗಳು ಯೆಮೆನ್‌ನಲ್ಲಿರುವ ಹೌತಿ ಬಂಡುಕೋರರೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವುದರಿಂದ ಸಂಘರ್ಷವು ಗಣನೀಯವಾಗಿ ಹೆಚ್ಚಿನ ಸರಕು ಸಾಗಣೆ ಸುಂಕಗಳಿಗೆ ಕಾರಣವಾಗಬಹುದು. ಅವರು ಕೆಂಪು ಸಮುದ್ರ ಮತ್ತು ಗಲ್ಫ್ ಆಫ್ ಅಡೆನ್ ಮಾರ್ಗಗಳ ಮೂಲಕ ಸರಕು ಸಾಗಿಸುವ ವ್ಯಾಪಾರಿ ಹಡಗುಗಳ ಮೇಲಿನ ಹೆಚ್ಚಿನ ದಾಳಿಗಳಿಗೆ ಕಾರಣರಾಗಿದ್ದಾರೆ.

ಕೆಂಪು ಸಮುದ್ರದ ಬಿಕ್ಕಟ್ಟು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಾರಂಭವಾಯಿತು, ಇರಾನ್ ಬೆಂಬಲಿತ ಹೌತಿ ಈ ಪ್ರದೇಶದಲ್ಲಿ ಜಾಗತಿಕ ವ್ಯಾಪಾರವನ್ನು ಅಡ್ಡಿಪಡಿಸಿತ್ತು. ಭಾರತಕ್ಕೆ ಇದು ಪೆಟ್ರೋಲಿಯಂ ರಫ್ತುಗಳ ಮೇಲೆ ಪರಿಣಾಮ ಬೀರಿತು, 2023ರ ಆರ್ಥಿ ವರ್ಷದಲ್ಲಿ ಭಾರತದ ಒಟ್ಟಾರೆ ಸರಕು ವ್ಯಾಪಾರ (ರಫ್ತು ಮತ್ತು ಆಮದು ಸೇರಿ) 94 ಲಕ್ಷ ಕೋಟಿ ರೂಪಾಯಿಗಳಾಗಿದ್ದು, 95 ಪ್ರತಿಶತ ಸಮುದ್ರದ ಮೂಲಕ ರವಾನಿಸಲಾಗಿದೆ. ಸಂಘರ್ಷ ಮುಂದುವರೆದರೆ ಭರತಕ್ಕೆ ದೊಡ್ಡ ತಲೆ ನೋವು ಎದುರಾಗಲಿದೆ ಪೆಟ್ರೋಲಿಯಂ ಹಾಗೂ ಅದರ ಉತ್ಪನ್ನಗಳ ಪೂರೈಕೆಯಲ್ಲಿ ಗಂಭೀರ ಸಮಸ್ಯೆಗಳು ಉದ್ಭವಿಸುವ ಸಾಧ್ಯತೆ ಇದೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Post a Comment

Previous Post Next Post