Savarkar Row: ಸಾವರ್ಕರ್ ಗೋಮಾಂಸ ತಿಂತಿದ್ದರು ಎಂದ ದಿನೇಶ್ ಗುಂಡೂರಾವ್, ಬ್ರಾಹ್ಮಣ ತಂದೆ ಹೇಳಿದ್ದೋ? ಮುಸ್ಲಿಂ ಪತ್ನಿ ಹೇಳಿದ್ದೋ? ಅಂತ ಬಿಜೆಪಿ ಕೆಂಡ


 ಸಾಂದರ್ಭಿಕ ಚಿತ್ರ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಸಾವರ್ಕರ್ ಬಗ್ಗೆ ನೀಡಿರುವ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು: ಸಾವರ್ಕರ್ (Veer Savrkar) ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು, ಅವರು ಗೋಮಾಂಸ (Beef Eater) ತಿನ್ನುತ್ತಿದ್ದರು ಎಂದು ಹೇಳಿಕೆ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ವಿರುದ್ಧ ಬಿಜೆಪಿ ಕೆಂಡಕಾರಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ‘ದಿನೇಶ್ ಗುಂಡೂರಾವ್ ಅವರೇ, ಬ್ರಾಹ್ಮಣ ಸಮಾಜದ ವೀರ ಸಾವರ್ಕರ್‌ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್‌ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್‌ ಅವರು ಹೇಳಿದ್ದರೋ’ ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಸಾವರ್ಕರ್ ಬಗ್ಗೆ ನೀಡಿರುವ ಹೇಳಿಕೆ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: Mysuru Dasara: ವಿಶ್ವವಿಖ್ಯಾತ ಮೈಸೂರು ದಸರಾಗೆ ವೈಭವದ ಚಾಲನೆ, ನಾಡದೇವಿಗೆ ಪುಷ್ಪಾರ್ಚನೆಗೈದು ಸಾಹಿತಿ ಹಂಪನಾರಿಂದ ಉದ್ಘಾಟನೆ

ದೇವೇಂದ್ರ ಫಡ್ನವಿಸ್ ತಿರುಗೇಟು!

ದಿನೇಶ್ ಗುಂಡೂರಾವ್ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸುತ್ತಿದ್ದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ತಿರುಗೇಟು ನೀಡಿದ್ದು, ‘ಸ್ವಾತಂತ್ರ್ಯ ಹೋರಾಟಗಾರನ ಪರಂಪರೆಯನ್ನು ಅರ್ಥ ಮಾಡಿಕೊಳ್ಳದೆ ಅವರನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ. ಈ ಜನರಿಗೆ (ಕಾಂಗ್ರೆಸ್‌) ಸಾವರ್ಕರ್ ಬಗ್ಗೆ ಏನೂ ತಿಳಿದಿಲ್ಲ. ಹೀಗಾಗಿ ಅವರನ್ನು ಅವಮಾನಿಸುತ್ತಲೇ ಇರುತ್ತಾರೆ ಎಂದು ಕಿಡಿಕಾರಿದ್ದಾರೆ.

ದಿನೇಶ್ ಗುಂಡೂರಾವ್ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಂದ್ರ ಫಡ್ನವಿಸ್, ‘ಅವರಿಗೆ ಸಾವರ್ಕರ್ ಬಗ್ಗೆ ಏನೂ ತಿಳಿದಿಲ್ಲ. ಸಾವರ್ಕರ್ ಅವರ ದೃಷ್ಟಿಕೋನಗಳು ಭಾರತದ ಗ್ರಾಮೀಣ ಜೀವನದಲ್ಲಿ ಆಳವಾಗಿ ಬೇರೂರಿದೆ. ರಾಹುಲ್ ಗಾಂಧಿಯಿಂದ ಪ್ರಾರಂಭವಾದ ಸಾವರ್ಕರ್ ಮೇಲಿನ ದಾಳಿಗಳು ಈಗ ಇತರರು ಅದನ್ನು ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ದಿನೇಶ್ ಗುಂಡೂರಾವ್ ಹೇಳಿದ್ದೇನು?

ಬೆಂಗಳೂರಿನಲ್ಲಿ ಗಾಂಧೀ ಜಯಂತಿ ಪ್ರಯುಕ್ತ ನಡೆದ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವ ದಿನೇಶ್ ಗುಂಡೂರಾವ್, ‘ಈಗ ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ಅವರ ವಾದ ಅಲ್ಲ. ಗೋಡ್ಸೆಗೆ ಉತ್ತರ ಗಾಂಧೀಜಿಯವರೇ. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು’ ಎಂದು ಹೇಳಿದ್ದರು.

ಇದನ್ನೂ ಓದಿ: BJP-JDS ಮೈತ್ರಿಗೆ ಶಾಕ್ ಕೊಟ್ಟ ದೇವೇಗೌಡ! ದಸರಾ ವೇದಿಕೆಯಲ್ಲೇ ಸಿದ್ದರಾಮಯ್ಯಗೆ ಬಹುಪರಾಕ್! ಸಿಎಂ ಫುಲ್ ಖುಷ್!

ಅಲ್ಲದೇ, ‘ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು ಮತ್ತು ಗೋಮಾಂಸ ಸೇವಿಸುತ್ತಿದ್ದರು. ಆದರೆ ಗಾಂಧೀಜಿಯವರು ಸಸ್ಯಹಾರಿ, ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು ಎಂದು ಹೇಳಿದ್ದರು.

ದೇಶದಲ್ಲಿ ಇಂದು ಗಾಂಧೀವಾದ ಎದುರು ಸಾವರ್ಕರ್ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು, ರಾಷ್ಟ್ರೀಯವಾದ ಕಾಣಲು ಸಾಧ್ಯವಾದರೂ, ಪ್ರಜಾಪ್ರಭುತ್ವದ ಪರವಾದ ವ್ಯಕ್ತಿತ್ವ ಇರಲಿಲ್ಲ. ಆದರೆ ಗಾಂಧೀಜಿ ಅವರದ್ದು ಡೆಮಾಕ್ರೆಟಿಕ್ ವ್ಯಕ್ತಿತ್ವ ಎಂದು ಸಚಿವರು ಹೇಳಿದ್ದರು.

Post a Comment

Previous Post Next Post