Siddaramaiah: ಇಡಿ ಎಂಟ್ರಿಯಿಂದ ಮತ್ತಷ್ಟು ಬಲವಾದ ಮುಡಾ ಕೇಸ್! ಸಿದ್ದರಾಮಯ್ಯಗೆ ಶುರುವಾಯ್ತು ಬಂಧನದ ಭೀತಿ


 ಸಿಎಂ ಸಿದ್ದರಾಮಯ್ಯ

 ಎಫ್‌ಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಎಂಬುವವರ ಹೆಸರು ಉಲ್ಲೇಖಿಸಲಾಗಿದೆ. ದೇವರಾಜು ಅವರಿಂದ ಮಲ್ಲಿಕಾರ್ಜುನ ಸ್ವಾಮಿ ಜಮೀನು ಖರೀದಿಸಿ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ದ ಹಾಗೂ ಅವರ ಪತ್ನಿ (His Wife) ಸೇರಿದಂತೆ ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ’ ಅಡಿಯಲ್ಲಿ ಪ್ರಕರಣ (Case) ದಾಖಲಿಸಿಕೊಂಡಿದೆ. ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ (PTI) ವರದಿ ಮಾಡಿದೆ. ಇಡಿಯು ಇಸಿಐಆರ್ (ಎನ್‌ಫೋರ್ಸ್‌ಮೆಂಟ್‌ ಕೇಸ್‌ ಇನ್ಫರ್ಮೇಷನ್‌ ರಿಪೋರ್ಟ್‌) ದಾಖಲಿಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ’ ಪಿಟಿಐ’ ವರದಿ ಮಾಡಿದೆ.

ಎಫ್‌ಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಎಂಬುವವರ ಹೆಸರು ಉಲ್ಲೇಖಿಸಲಾಗಿದೆ. ದೇವರಾಜು ಅವರಿಂದ ಮಲ್ಲಿಕಾರ್ಜುನ ಸ್ವಾಮಿ ಜಮೀನು ಖರೀದಿಸಿ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.

ECIR ದಾಖಲು

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಬಂಧನದ ಭೀತಿಯಲ್ಲಿ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ ದಾಖಲಿಸಿರುವ ನಿರೀಕ್ಷೆ ಇದೆ. ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯು ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಅನ್ನು ಅಧ್ಯಯನ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಸಿಐಆರ್ ಪೊಲೀಸ್ ಎಫ್ಐಆರ್ ಸಮನಾಗಿರುತ್ತದೆ.

ಸಿಬಿಐ ತೂಗುಗತ್ತಿ

ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಎರೆಡೆರಡು ಟೆನ್ಷನ್ ಶುರುವಾಗಿದೆ. ಒಂದು ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದ್ದು, ಪಾರದರ್ಶಕ ತನಿಖೆಯಾಗಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಕೂಡ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿದ್ದಾರೆ.

ಸಿಎಂ ವಿರುದ್ದ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲು

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಐಪಿಸಿ 120ಬಿ (ಕ್ರಿಮಿನಲ್ ಪಿತೂರಿ, ಒಳ ಸಂಚು), 166 (ಸರ್ಕಾರಿ ಸೇವಕರಿಂದ ಕಾನೂನು ಉಲ್ಲಂಘನೆ), 403 (ಅಪ್ರಾಮಾಣಿಕವಾಗಿ ಆಸ್ತಿಯ ದುರ್ಬಳಕೆ), 406 (ಅಪರಾಧಿಕ ನಂಬಿಕೆ ದ್ರೋಹ), 420 (ವಂಚನೆ), 426 (ಕಿಡಿಗೇಡಿತನ), 465 (ನಕಲಿ ದಾಖಲೆ ಸೃಷ್ಟಿ), 468 (ನಕಲಿ ದಾಖಲೆ ಸೃಷ್ಟಿಸಿ ಲಾಭ ಪಡೆದುಕೊಳ್ಳುವುದು), 340 (ವ್ಯಕ್ತಿಯ ಕಾರ್ಯಚಟುವಟಿಕೆಗೆ ನಿರ್ಬಂಧ), 351 (ನಿರ್ಬಂಧಿಸಿದ ವ್ಯಕ್ತಿ ಕಾರ್ಯಮುಂದುವರಿಸಿದರೆ ದಾಳಿ ನಡೆಸುವ ಬೆದರಿಕೆ), 9 (ಲಂಚ ಸ್ವೀಕಾರ, ಅಥವಾ ಲಂಚ ನೀಡಲು ಶಿಕ್ಷೆ, ವೈಯಕ್ತಿಕ ಪ್ರಭಾವ), 13 (ಸರಕಾರಿ ನೌಕರನಿಂದ ಅಧಿಕಾರ ದುರ್ಬಳಕೆ) ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ.

ಇದೀಗ ಸಿದ್ದರಾಮಯ್ಯ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕೂಡ ಎಂಟ್ರಿ ಆಗಿದ್ದು ಸಿದ್ದರಾಮಯ್ಯನವರಿಗೆ ಬಂಧನ ಭೀತಿ ಎದುರಾಗಿದೆ.

Post a Comment

Previous Post Next Post