Tirupati Laddu Row: ತಿರುಪತಿ ಲಡ್ಡು ಪ್ರಕರಣದ ವಿಶೇಷ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ


  ಸಾಂದರ್ಭಿಕ ಚಿತ್ರ

ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಎಸ್‌ಐಟಿಯನ್ನು ರೂಪಿಸುತ್ತದೆ.

ದೆಹಲಿ: ತಿರುಪತಿ (Tirupati) ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ (Laddu) ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡದಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ಈ ವಿಷಯದ ಬಗ್ಗೆ ರಾಜಕೀಯ ಡ್ರಾಮವನ್ನು ಬಯಸುವುದಿಲ್ಲ, ಏಕೆಂದರೆ ಇದು ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಹೇಳಿದೆ.

ಎಸ್‌ಐಟಿಯು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಆಹಾರ ನಿಯಂತ್ರಕ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಹಿರಿಯ ಅಧಿಕಾರಿಯನ್ನು ಒಳಗೊಂಡಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ವಿಶ್ವಾದ್ಯಂತ ಜನರ ಭಾವನೆಗಳನ್ನು ಘಾಸಿಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ, ಆದರೆ ರಾಜಕೀಯ ಆರೋಪಗಳಿಗೆ ಹೋಗುವುದಿಲ್ಲ ಎಂದು ಪೀಠ ಹೇಳಿದೆ.‘ಆರೋಪ ಮತ್ತು ಪ್ರತ್ಯಾರೋಪಗಳ ವಿಚಾರಕ್ಕೆ ಹೋಗುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ. ನ್ಯಾಯಾಲಯವನ್ನು ರಾಜಕೀಯಕ್ಕೆ ಬಳಸಲು ನಾವು ಅನುಮತಿಸುವುದಿಲ್ಲ’ ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.

Post a Comment

Previous Post Next Post