HD Kumaraswamy: IPS ಅಧಿಕಾರಿಗೆ ಬೆದರಿಕೆ ಪ್ರಕರಣ! ಕುಮಾರಸ್ವಾಮಿ ವಿರುದ್ಧ ದಾಖಲಾಯ್ತು ಎಫ್‌ಐಆರ್!


 ನ್ಯಾಯಾಲಯದ ಆದೇಶದ ಮೇರೆಗೆ ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಆರೋಪಿ ನಂಬರ್​ 2 ಆಗಿದ್ದಾರೆ. ಮತ್ತು ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ.

 ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್​ (ADGP Chandrashekar) ಅವರು ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ.

ನ್ಯಾಯಾಲಯದ ಆದೇಶದ ಮೇಲೆ ಎಫ್‌ಐಆರ್ ದಾಖಲು

ನ್ಯಾಯಾಲಯದ ಆದೇಶದ ಮೇರೆಗೆ ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಆರೋಪಿ ನಂಬರ್​ 2 ಆಗಿದ್ದಾರೆ. ಮತ್ತು ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ.

ಬೆದರಿಕೆ ಆರೋಪದ ಮೇಲೆ ದೂರು ನೀಡಿದ್ದ ಐಪಿಎಸ್ ಅಧಿಕಾರಿ

ಚಂದ್ರಶೇಖರ್ ಅವರು, ಆರೋಪಿಗಳಾದ ಹೆಚ್‌ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ.  ನನಗೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು  ದೂರಿನಲ್ಲಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್​ಐಆರ್​ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ

ಸಾಯಿ ಮಿನರಲ್ಸ್​ ಕಂಪನಿಗೆ ನಿಯಮಗಳನ್ನು ಗಾಳಿಗೆ ತೂರಿ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಸಾಕಾಷ್ಟು ದಾಖಲೆಗಳನ್ನು ಕಲೆ ಹಾಕಿ, ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಲೋಕಾಯುಕ್ತ ಎಸ್​ಐಟಿ ಎಡಿಜಿಪಿ ಚಂದ್ರಶೇಖರ್​ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು, ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ. ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಾನು ಬೇಲ್ ತಗೊಂಡೆ, ತನಿಖೆಗೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂಬರ್ 2. ಹೈಕೋರ್ಟ್​​​ನಲ್ಲಿ ಅಧಿಕಾರಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

 ಕುಮಾರಸ್ವಾಮಿ ಅವರು ಆರೋಪ ಮಾಡಿದ ಬಳಿಕ ಎಡಿಜಿಪಿ ಚಂದ್ರಶೇಖರ್​​ ಅವರು, ತಮ್ಮ ಸಿಬ್ಬಂದಿಗೆ ಪತ್ರ ಬರೆದು, ಹೆಚ್​ ಡಿ ಕುಮಾರಸ್ವಾಮಿ ಅವರು ನನ್ನ ಮೇಲೆ ಸಾಕಷ್ಟು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮತ್ತು ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವರು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಗೆ ನಾವು ನಿರಾಶೆಗೊಳ್ಳಬಾರದರು ಎಂದು ಹೇಳಿದ್ದರು.

Post a Comment

Previous Post Next Post