ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ (Mysore) ಕಳೆದ ಮೂರು ವರ್ಷಗಳ ಹಿಂದೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ (Gang Rape Case) ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಮತ್ತೊಂದು ಅಂತಹದ್ದೇ ಪ್ರಕರಣವೊಂದು ನಡೆದಿದೆ. ಹೌದು, ಯುವತಿಯ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ನಡೆದಿದೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ದೂರು ದಾಖಲಾದ 24 ಗಂಟೆಗಳಲ್ಲಿ ಕಾಮುಕರನ್ನು ಬಂಧಿಸಲಾಗಿದೆ.
ಅತ್ಯಾಚಾರದ ವಿಡಿಯೋ ರೆಕಾರ್ಡ್ ಮಾಡಿದ್ದ ಕಾಮುಕರು!ಸಂತ್ರಸ್ತ ಯುವತಿ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ಶನಿವಾರ ಮಧ್ಯಾಹ್ನ ಪಬ್ ವೊಂದಲ್ಲಿ ಯುವತಿಗೆ ಶ್ರೇಯಸ್ ಪರಿಚಯ ಆಗಿದ್ದಾನೆ. ಮೊದಲ ದಿನದ ಪರಿಚಯ ಸ್ನೇಹಕ್ಕೆ ತಿರುಗಿ ಕ್ಲೋಸ್ ಆಗಿದ್ದಾರೆ. ಅದೇ ದಿನ ರಾತ್ರಿ ಪಬ್ ನಿಂದಲೇ ರಿಂಗ್ ರಸ್ತೆಯ ಹೋಟೆಲ್ ನಲ್ಲಿ ಶ್ರೇಯಸ್ ರೂಂ ಬುಕ್ ಮಾಡಿದ್ದಾನೆ. ಅಲ್ಲಿಂದ ಯುವತಿ ಶ್ರೇಯಸ್ ಇಬ್ಬರು ರೂಂ ಗೆ ಹೋದಾಗ ಅಲ್ಲಿ ಶ್ರೇಯಸ್ ಸಂಬಂಧಿಕ ಶಶಾಂಕ್ ಕೂಡ ಹಾಜರಿದ್ದನಂತೆ. ಇಬ್ಬರು ಒಟ್ಟಾಗಿ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ, ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಸ್ನೇಹಿತರಿಗೆ ಕಳಿಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ.
24 ಗಂಟೆಯೊಳಗೆ ಆರೋಪಿಗಲ ಬಂಧನ!
ಸ್ನೇಹಿತರಿಗೆಲ್ಲ ಅತ್ಯಾಚಾರದ ವಿಡಿಯೋ ಕಳಿಸಿರುವುದು ತಿಳಿದು ಯುವತಿ ಪಿಜಿಗೆ ತೆರಳಿ ವಿಶ್ರಾಂತಿ ಪಡೆದಿದ್ದಾಳೆ. ಭಾನುವಾರ ಸಂಜೆ ವಿಜಯನಗರ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಮೇಲಿನ ಎಲ್ಲ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ವಿಜಯ ನಗರ ಪೊಲೀಸರು, ಆರೋಪಿಗಳಿಬ್ಬರನ್ನು 24 ಗಂಟೆಯೊಳಗೆ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದೇಶವನ್ನೇ ಬೆಚ್ಚಿಬೀಳಿಸಿತ್ತು 3 ವರ್ಷಗಳ ಹಿಂದಿನ ಪ್ರಕರಣ!
ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ.

Post a Comment