ಜಮ್ಮು ಕಾಶ್ಮೀರ ಅಸೆಂಬ್ಲಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ರಾಜ್ಯಕ್ಕೆ ಈ ಹಿಂದೆ ಇದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಕೋರಿ ಐತಿಹಾಸಿಕ ನಿರ್ಣಯವನ್ನು ಬುಧವಾರ ಅಂಗೀಕರಿಸಿತು. ಈ ಪ್ರಸ್ತಾವನೆಯನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಮಂಡಿಸಿದ್ದಾರೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯು (Jammu and Kashmir Assembly) ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವ (Article 370) ಪ್ರಸ್ತಾಪವನ್ನು ಅಂಗೀಕರಿಸಿದೆ. ಈ ಪ್ರಸ್ತಾವನೆಯನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ (Surinder Singh Choudhary) ಮಂಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ರಾಜ್ಯಕ್ಕೆ ಈ ಹಿಂದೆ ಇದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಕೋರಿ ಐತಿಹಾಸಿಕ ನಿರ್ಣಯವನ್ನು ಬುಧವಾರ ಅಂಗೀಕರಿಸಿತು. ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೇಳುವ ನಿರ್ಣಯವನ್ನು ವಿಧಾನಸಭೆ ಧ್ವನಿ ಮತದ ಮೂಲಕ ಅಂಗೀಕರಿಸಿತು. ನ್ಯಾಷನಲ್ ಕಾನ್ಫರೆನ್ಸ್ ಸದಸ್ಯರು ಈ ಪ್ರಸ್ತಾಪವನ್ನು ಬೆಂಬಲಿಸಿದರೆ ಬಿಜೆಪಿ ಶಾಸಕರು ವಿರೋಧಿಸಿದರು. ಆದರೆ, ವಿಶೇಷ ಸಂಗತಿಯೆಂದರೆ ಈ ಪ್ರಸ್ತಾವನೆಯಲ್ಲಿ 370ನೇ ವಿಧಿಯ ಪ್ರಸ್ತಾಪವನ್ನು ಮಾಡಿಲ್ಲ.
ಜಮ್ಮು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮುಂದೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಸಂವಾದವನ್ನು ಪ್ರಾರಂಭಿಸುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಆಗ ಸದನದಲ್ಲಿ ಬಿಜೆಪಿ ನಾಯಕ ಲೋಪಿ ಸುನಿಲ್ ಶರ್ಮಾ ಅವರು ಈ ನಿರ್ಣಯವನ್ನು ವಿರೋಧಿಸಿದರು, ಅಲ್ಲದೇ, ಸಂಸತ್ತು 370 ನೇ ವಿಧಿಯನ್ನು ರದ್ದುಗೊಳಿಸಿದೆ ಮತ್ತು ಅದನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಜಮ್ಮು ಕಾಶ್ಮೀರ ಸದನವು ಅಂಗೀಕರಿಸಿದ ನಿರ್ಣಯವು ಹೀಗಿದೆ: ‘ಈ ಶಾಸನಸಭೆಯು ವಿಶೇಷ ಸ್ಥಾನಮಾನ ಮತ್ತು ಸಾಂವಿಧಾನಿಕ ಖಾತರಿಗಳ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ, ಇದು ಜಮ್ಮು ಮತ್ತು ಕಾಶ್ಮೀರದ ಜನರ ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುತ್ತದೆ ಮತ್ತು ಅದರ ಏಕಪಕ್ಷೀಯ ತೆಗೆದುಹಾಕುವಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ.’
‘ವಿಶೇಷ ಸ್ಥಾನಮಾನ, ಸಾಂವಿಧಾನಿಕ ಖಾತರಿಯನ್ನು ಮರುಸ್ಥಾಪಿಸಲು ಮತ್ತು ನಿಬಂಧನೆಗಳನ್ನು ಮರುಸ್ಥಾಪಿಸಲು ಸಾಂವಿಧಾನಿಕ ಕಾರ್ಯವಿಧಾನಗಳನ್ನು ರೂಪಿಸಲು ಜಮ್ಮು ಮತ್ತು ಕಾಶ್ಮೀರದ ಜನರ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದವನ್ನು ಪ್ರಾರಂಭಿಸಲು ಈ ಸಭೆಯು ಭಾರತ ಸರ್ಕಾರವನ್ನು ಕೋರುತ್ತದೆ. ಈ ಅಸೆಂಬ್ಲಿ ಮರುಸ್ಥಾಪನೆಯ ಯಾವುದೇ ಪ್ರಕ್ರಿಯೆಯು ರಾಷ್ಟ್ರೀಯ ಏಕತೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ರಕ್ಷಿಸುತ್ತದೆ ಎಂದು ಒತ್ತಿಹೇಳುತ್ತದೆ’ ಉಲ್ಲೇಖಿಸಲಾಗಿದೆ.ಅದಹಾಗೆ, ಆಗಸ್ಟ್ 2019 ರಲ್ಲಿ, ಕೇಂದ್ರ ಸರ್ಕಾರವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿತ್ತು. ಈ ನಿಬಂಧನೆಯು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ವಾಯತ್ತ ಸ್ಥಾನಮಾನವನ್ನು ನೀಡಿತ್ತು, ಜಮ್ಮು ಕಾಶ್ಮೀರ ಪ್ರದೇಶವು ರಕ್ಷಣೆ, ಸಂವಹನ ಮತ್ತು ವಿದೇಶಾಂಗ ವ್ಯವಹಾರಗಳಂತಹ ವಿಷಯಗಳನ್ನು ಹೊರತುಪಡಿಸಿ ತನ್ನದೇ ಆದ ಸಂವಿಧಾನ ಮತ್ತು ಧ್ವಜವನ್ನು ಒಳಗೊಂಡಂತೆ ಅದರ ಆಂತರಿಕ ವ್ಯವಹಾರಗಳ ಮೇಲೆ ಮಹತ್ವದ ನಿಯಂತ್ರಣವನ್ನು ಅನುಮತಿಸುತ್ತದೆ.
370ನೇ ವಿಧಿ ರದ್ದು ಬಳಿಕ ರಾಜ್ಯವನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ಮರುಸ್ಥಾಪಿಸಲಾಯಿತು: ಸದ್ಯ ಜಮ್ಮು ಮತ್ತು ಕಾಶ್ಮೀರ, ಶಾಸಕಾಂಗ ಸಭೆಯನ್ನು ಉಳಿಸಿಕೊಂಡಿದೆ ಮತ್ತು ಲಡಾಖ್ ಅನ್ನು ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಉಳಿಸಲಾಗಿದೆ.
ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರಕ್ಕೆ ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮತ್ತು ಇತರರು ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ವ್ಯಾಪಕ ವಿರೋಧವನ್ನು ವ್ಯಕ್ತವಾಗಿತ್ತು. ಕಳೆದ ವರ್ಷ ಡಿಸೆಂಬರ್ 11 ರಂದು, ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದಿದೆ

Post a Comment