ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆಯಲ್ಲಾ ಛಿದ್ರ ಛಿದ್ರವಾಗಿವೆ. ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಸ್ಫೋಟ ಸಂಭವಿಸುವ ವೇಳೆ ಮನೆಯಲ್ಲಿ ಮಕ್ಕಳ ಸಹಿತ 8 ಮಂದಿ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.
ಉಡುಪಿ: ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ (Gas Cylinder Blast) ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ನಿನ್ನೆ ಸಂಜೆ ಉಡುಪಿ (Udupi) ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್‌ವೊಂದರಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಾರ್ಟ್‌ಮೆಂಟ್‌ನಲ್ಲಿ ಏಕಾಏಕಿ ಬೆಂಕಿ!
ಮೂರು ಅಂತಸ್ತಿನ ಅಪಾರ್ಟ್ ಮೆಂಟ್‌ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.
ಮನೆ ಗೋಡೆಯಲ್ಲಾ ಛಿದ್ರ ಛಿದ್ರ!
ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆಯಲ್ಲಾ ಛಿದ್ರ ಛಿದ್ರವಾಗಿವೆ. ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಸ್ಫೋಟ ಸಂಭವಿಸುವ ವೇಳೆ ಮನೆಯಲ್ಲಿ ಮಕ್ಕಳ ಸಹಿತ 8 ಮಂದಿ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ
ಸಂಭವನೀಯ ಅನಾಹುತ ತಪ್ಪಿಸಿದ ಅಗ್ನಿಶಾಮಕ ಸಿಬ್ಬಂದಿ
ಸಿಲಿಂಡರ್ ಸ್ಫೋಟದ ಬಳಿಕ ತಕ್ಷಣವೇ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

Post a Comment