ಬಿ ಎಸ್ ಯಡಿಯೂರಪ್ಪ
ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇಂದು ಯಡಿಯೂರಪ್ಪ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು.
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ (Sexual harassment) ನೀಡಿದ ಆರೋಪದ ಮೇರೆಗೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ (Pocso) ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ನಡೆಯಿತು. ಇದೀಗ ಕೋರ್ಟ್ ವಿಚಾರಣೆಯನ್ನು ಮುಂದೂಡಿದ್ದು, ಡಿ.06ರ ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠ ತೀರ್ಮಾನ
ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ವಿನಾಯಿತಿ ನೀಡಿತ್ತು. ಇನ್ನು ವಿನಾಯಿತಿ ರದ್ದುಕೋರಿ ಎಸ್ಐಟಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಯಿತು, ಇದೀಗ ಮತ್ತೆ ಕೋರ್ಟ್ ವಿಚಾರಣೆ ಮುಂದೂಡಿದ್ದು, ಡಿ.06ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ದಿನಾಂಕವನ್ನು ನಿಗದಿ ಪಡಿಸಿದೆ. ಮುಂದಿನ ಆದೇಶದವರೆಗೂ ಮಧ್ಯಂತರ ರಕ್ಷಣೆ ಮುಂದುವರಿಕೆ‘ ಆಗಲಿದೆ.
ಪ್ರಕರಣದ ಹಿನ್ನೆಲೆ ಏನು?
ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.
ಪೋಕ್ಸೋ ಎಫ್‌ಐಆರ್‌ನಲ್ಲಿ ಏನಿದೆ**?**
ದೂರುದಾರರು ತಿಳಿಸಿರುವಂತೆ ತಾಯಿ ಮತ್ತು ಮಗಳು ಕಳೆದ ಫೆಬ್ರವರಿ 2ರಂದು ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಲು ಬಿಎಸ್‌ವೈ ಮನೆಗೆ ತೆರಳಿದ್ದರು. ಆ ವೇಳೆ ಬಿಎಸ್ ಯಡಿಯೂರಪ್ಪನವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅದಲ್ಲದೇ ಬಳಿಕ ಯಡಿಯೂರಪ್ಪನವರು ಕ್ಷಮೆಯಾಚಿಸಿ, ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ, ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿರುತ್ತಾರೆ ಎಂದು ಸಂತ್ರಸ್ತೆಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಫೆಬ್ರವರಿ 2ನೇ ತಾರೀಖು, ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ರಾಜಕೀಯ ಪ್ರೇರಿತವೇ**?**
ಇನ್ನು ಪೋಕ್ಸೋ ಕೇಸ್ ರಾಜಕೀಯ ಪ್ರೇರಿತವೇ ಎಂದು ಪ್ರಶ್ನಿಸಿದಕ್ಕೆ ಮುಗುಳ್ನಕ್ಕ ಬಿಎಸ್‌ವೈ ನಾನು ಇದನ್ನು ಎದುರಿಸ್ತೇನೆ. ಇದನ್ನು ರಾಜಕೀಯ ಪ್ರೇರಿತ ಎಂದು ಯಾಕೆ ಹೇಳಲಿ ಎಂದು ಈ ಹಿಂದೆ ಅವರು ಹೇಳಿದ್ದರು. ಲೋಕಸಭಾ ಚುನಾವಣೆ ತಯಾರಿ ಬಗ್ಗೆಯೂ ಮಾತನಾಡಿದ ಯಡಿಯೂರಪ್ಪ ಬಹಳ ಒಳ್ಳೆ ವಾತಾವರಣ ಇದೆ. ಮೋದಿ ಆಶೀರ್ವಾದದಿಂದ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಪ್ರಯತ್ನ ನಡೆಯುತ್ತಿದೆ. ಕನಿಷ್ಠ 26 ಗೆಲ್ಲುವ ವಿಶ್ವಾಸ ಇದೆ. ಯಶಸ್ಸೂ ಗಳಿಸುತ್ತೇವೆ ಎಂದಿದ್ದರು.

Post a Comment