MUDA Scam: ಸಿದ್ದರಾಮಯ್ಯಗೆ ಅಸಲಿ ಸಂಕಷ್ಟ ಈಗ ಶುರು! ಮುಡಾ ದಾಖಲೆ ತಿದ್ದಲಾಗಿದೆಯಾ? ED ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ


 ಸದ್ಯದಲ್ಲೇ ಬೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಇ.ಡಿ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಬೈರತಿ ಸುರೇಶ್ ವಿಚಾರಣೆ ನಂತರ ಪ್ರಕರಣದ ಮೊದಲ ಆರೋಪಿ ಸಿದ್ದರಾಮಯ್ಯ ಹಾಗೂ 2ನೇ ಆರೋಪಿಯಾಗಿರುವ ಪತ್ನಿ ಪಾರ್ವತಿ ಅವರಿಗೂ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಂಭವವೂ ಇದೆ. ಈಗ ಸಿದ್ದರಾಮಯ್ಯ ಅವರಿಗೆ ಅಸಲಿ ಸಂಕಷ್ಟ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ (State Politics) ಭಾರಿ ಸದ್ದು ಮಾಡಿರುವ ಮುಡಾ ಹಗರಣ (MUDA Scam) ವಿಚಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಇದೀಗ ಅಸಲಿ ಸಂಕಷ್ಟ ಶುರುವಾಗುವ ಸಾಧ್ಯತೆ ಹೆಚ್ಚಾಗಿದೆ. ಅಕ್ರಮ ನಿವೇಶನ ಹಂಚಿಕೆ ಕುರಿತು ತನಿಖೆ ನಡೆಸುತ್ತಿರುವ ಜಾರಿನಿರ್ದೇಶನಾಲಯ(ED) ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ (Deepa Cholan) ಅವರಿಗೆ ನೋಟಿಸ್ ಜಾರಿ ಮಾಡಿತ್ತು, ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ಇದೀಗ ಇಡಿ ಕಚೇರಿಗೆ ತೆರಳಿದ್ದಾರೆ.

 ಮುಡಾ ಹಗರಣ ಸಂಬಂಧ ದಾಖಲೆಗಳನ್ನ ತಿದ್ದಿರುವ ಆರೋಪ

 2023ರಲ್ಲಿ ಮುಡಾ ಹಗರಣ ಸಂಬಂಧ ದಾಖಲೆಗಳನ್ನ ತಿದ್ದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅವರಿಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಇದೀಗ ಅವರು ದಾಖಲೆ ಸಹಿತವಾಗಿ ವಿಚಾರಣೆಗೆ ಹಾಜರಾಗಿದ್ದಾರೆ.

ಸಚಿವರಿಗೂ ನೋಟಿಸ್ ಸಾಧ್ಯತೆ!

ಮುಡಾ ಪ್ರಕರಣದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಇ.ಡಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೂ ಶೀಘ್ರದಲ್ಲೇ ನೋಟಿಸ್ ನೀಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯಗೆ ಅಸಲಿ ಸಂಕಷ್ಟ ಶುರು!

ಸದ್ಯದಲ್ಲೇ ಬೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಇ.ಡಿ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಬೈರತಿ ಸುರೇಶ್ ವಿಚಾರಣೆ ನಂತರ ಪ್ರಕರಣದ ಮೊದಲ ಆರೋಪಿ ಸಿದ್ದರಾಮಯ್ಯ ಹಾಗೂ 2ನೇ ಆರೋಪಿಯಾಗಿರುವ ಪತ್ನಿ ಪಾರ್ವತಿ ಅವರಿಗೂ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಂಭವವೂ ಇದೆ. ಈಗ ಸಿದ್ದರಾಮಯ್ಯ ಅವರಿಗೆ ಅಸಲಿ ಸಂಕಷ್ಟ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.

3ನೇ ಆರೋಪಿ ವಿಚಾರಣೆ ನಡೆಸಲಾಗಿದೆ

ಈಗಾಗಲೇ ಪ್ರಕರಣದ 3ನೇ ಆರೋಪಿಯಾಗಿರುವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ಅವರನ್ನು ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಮುಡಾ ಆಯುಕ್ತರು, ಮುಡಾ ಅಧ್ಯಕ್ಷರು ಸೇರಿದಂತೆ ಅನೇಕರನ್ನು ವಿಚಾರಣೆಗೊಳಪಡಿಸಿ ಹೇಳಿಕೆಯನ್ನು ಪಡೆಯಲಾಗಿದೆ.

ದಾಖಲೆ ಕದ್ದ ಆರೋಪ!

ಬೈರತಿ ಸುರೇಶ್ ಅವರು ನಗರಾಭಿವೃದ್ದಿ ಸಚಿವರಾಗಿರುವುದರಿಂದ ಅವರು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಮತ್ತು ಇಡಿ ಅಧಿಕಾರಿಗಳಿಗೆ ಮೂಲ ದಾಖಲೆಗಳು ಪತ್ತೆಯಾಗದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಕೆಲ ದಿನಗಳ ಹಿಂದೆ ಮುಡಾದ ಮಾಜಿ ಆಯುಕ್ತರ ವಿಚಾರಣೆ

ಕೆಲ ದಿನಗಳ ಹಿಂದೆ ಮುಡಾದ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆ ನಡೆಸಲಾಗಿತ್ತು. ಮುಡಾವು ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

 ಇಲಾಖೆಯ ಕಚೇರಿಗೆ ನಿನ್ನೆ ನೋಟಿಸ್ ಅಂಟಿಸಲಾಗಿತ್ತು

 ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆಯ ಕಚೇರಿಗೆ ನಿನ್ನೆ ನೋಟಿಸ್ ಅಂಟಿಸಲಾಗಿತ್ತು. ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ದಾಖಲೆಗಳ ಸಮೇತ ಹಾಜರಾಗುವಂತೆ ಇ.ಡಿ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿತ್ತು.

Post a Comment

Previous Post Next Post