ಸಚಿವರ ಮೇಲೆ ಕೆಸರು ಎರಚಿರುವ ಜನ
ಚೆನ್ನೈ ಆಚೆಗೆ ನಡೆಯುತ್ತಿರುವ ಘಟನೆಗಳ ಬಗ್ಗೆ ನಿಗಾ ಇಡಲು ತಲೆಕೆಡಿಸಿಕೊಳ್ಳಲಿಲ್ಲ ಎಂದು ಅಣ್ಣಮಲೈ ಡಿಎಂಕೆ ಸರ್ಕಾರವನ್ನು ಟೀಕಿಸಿದರು.
ನವದೆಹಲಿ: ಫೆಂಗಲ್ ಚಂಡಮಾರುತದ ಅಬ್ಬರದಿಂದ ತಮಿಳುನಾಡಿದ ಹಲವು ಭಾಗಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ತಿರು ಪೊನ್ಮುಡಿ ಅವರು ಇಂದು ರಾಜ್ಯದ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ನೆರೆ ಸಂತ್ರಸ್ತರು ಸಚಿವರ ಮೇಲೆ ಕೆಸರು ಎರಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ಘಟನೆಯ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಸಾರ್ವಜನಿಕ ಹತಾಶೆ “ಕುದಿಯುವ ಹಂತ” ತಲುಪಿದೆ ಎಂದು ಹೇಳಿದರು.
ಇದು ತಮಿಳುನಾಡಿನ ಪ್ರಸ್ತುತ ಸ್ಥಿತಿ, ಸಿಎಂ ಮತ್ತು ಉಪಮುಖ್ಯಮಂತ್ರಿ ಚೆನ್ನೈನ ರಸ್ತೆಗಳಲ್ಲಿ ಫೋಟೋ ತೆಗೆಯುವುದರಲ್ಲಿ ನಿರತರಾಗಿದ್ದಾರೆ. ನಗರದಲ್ಲಿ ಮಳೆ ಕಡಿಮೆಯಾಗಿದೆ, ಆದರೆ ಚೆನ್ನೈ ಆಚೆಗೆ ನಡೆಯುತ್ತಿರುವ ಘಟನೆಗಳ ಬಗ್ಗೆ ನಿಗಾ ಇಡಲು ತಲೆಕೆಡಿಸಿಕೊಳ್ಳಲಿಲ್ಲ ಎಂದು ಅಣ್ಣಮಲೈ ಡಿಎಂಕೆ ಸರ್ಕಾರವನ್ನು ಟೀಕಿಸಿದರು.
ಇಂದು, ಭ್ರಷ್ಟ ಡಿಎಂಕೆ ಸಚಿವ ತಿರು ಪೊನ್ಮುಡಿ ಅವರು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರ ಹತಾಶೆಯು ಕುದಿಯುವ ಹಂತವನ್ನು ತಲುಪಿದೆ. ಅದಕ್ಕೆ ಅವರು ಕೆಸರನ್ನು ಸಚಿವರ ಮೇಲೆ ಎರಚಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಫೆಂಗಲ್ ಚಂಡಮಾರುತದ ಅಬ್ಬರ
ಫೆಂಗಲ್ ಚಂಡಮಾರುತದಿಂದ ಪ್ರವಾಹದ ಅಬ್ಬರ ಮುಂದುವರಿದಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೇ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಮನೆ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ದುರಂತದ ಸುದ್ದಿ ತಿಳಿದ ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Post a Comment