Yatnal: ರೆಬಲ್ ನಾಯಕ ಯತ್ನಾಳ್‌ಗೆ ಹೈಕಮಾಂಡ್ ಬಿಗ್ ಶಾಕ್! ಶೋಕಾಸ್ ನೋಟಿಸ್ ಜಾರಿ


 ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕುರಿತು ಇತ್ತೀಚೆಗೆ ದೆಹಲಿ ಪ್ರವಾಸ ಕೈಗೊಂಡಿದ್ದ ವಿಜಯೇಂದ್ರ ಅವರು, ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ನಾಯಕರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೆ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯು ಬಿಗ್ ಶಾಕ್ ಕೊಟ್ಟಿದೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಡೆದಾಟ ಜೋರಾಗಿದ್ದು,  ರೆಬಲ್ಸ್ ಸಾಲಿನಲ್ಲಿ ಗುರುತಿಸಿಕೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basanagowda Yatnal) & ಟೀಮ್ ಹೆಚ್ಚು ಸಕ್ರೀಯವಾಗಿದೆ.  ಉಪಚುನಾವಣೆಯ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರೇ (BS Yadiyurappa) ಕಾರಣ ಎಂಬಂತೆ ದಿನೇ ದಿನೇ ವಾಗ್ದಾಳಿ ನಡೆಸುತ್ತಿದ್ದಾರೆ. ಸದ್ಯ ಎಚ್ಚೆತ್ತುಕೊಂಡಿರುವ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯು ದೆಹಲಿ ಪ್ರವಾಸದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಗ್ ಶಾಕ್ ಕೊಟ್ಟಿದೆ. ಹೌದು, ಯತ್ನಾಳ್ ಅವರಿಗೆ ಇದೀಗ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಯತ್ನಾಳ್ ನಡೆ ಬಗ್ಗೆ ಕೇಂದ್ರದ ಶಿಸ್ತು ಸಮಿತಿ ಬೇಸರಗೊಂಡಿದ್ದು, ರಾಜ್ಯದ ಮಟ್ಟದ ನಾಯಕತ್ವದ ವಿರುದ್ಧ ನಿರಂತರ ವಾಗ್ದಾಳಿ, ಪಕ್ಷದ ನಿರ್ದೇಶನ ಗಳನ್ನು ಧಿಕ್ಕರಿಸಿರುವುದು ಮತ್ತು ರಾಜಕೀಯ, ಸಾರ್ವಜನಿಕ, ಪ್ರಾಮುಖ್ಯತೆಯ ಎಲ್ಲ ವಿಷಯಗಳ ಬಗ್ಗೆ ಪಕ್ಷದ ಅಧೀಕೃತ ನಿಲುವಿಗೆ ವಿರುದ್ದವಾಗಿ ಸಾರ್ವಜನಿಕ ಹೇಳಿಕೆಗಳು ಮತ್ತು ನಿಲುವು ಗಳನ್ನು ಮಾಧ್ಯಮಗಳು ಮತ್ತು ವಿವಿಧ ವೇದಿಕೆಗಳಲ್ಲಿ ವರದಿ ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಶೋಕಾಸ್ ನೋಟಿಸ್ ನೀಡಲಾಗಿದೆ.

 ಈ ಹಿಂದೆಯೂ ಹಲವು ಬಾರಿ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನದಿಂದ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಅಶಿಸ್ತಿನ ಕೃತ್ಯಗಳನ್ನು ಮುಂದುವರೆಸಿದ್ದೀರಿ. ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳಿಂದ ಬದಲಾಗುತ್ತೀರಿ ಎಂದು ತಿಳಿದಿತ್ತು ಆದರೆ ಮತ್ತೆ ನೀವು ತಮ್ಮ ವರ್ತನೆ ಮುಂದುವರಿಸಿ ಪಕ್ಷದ ನಿಯಮ ಉಲ್ಲಂಘಿಸಿದ್ದೀರಿ. ನಿಮ್ಮ ವಿರುದ್ಧ ಪಕ್ಷವೂ ಏಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು..? ಈ ಸೂಚನೆ ತಲುಪಿದ ಹತ್ತು ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚನೆ ನೀಡಲಾಗಿದೆ.

ಬಿಜೆಪಿಯ ರೆಬೆಲ್ ನಾಯಕ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಕೊಟ್ಟಿರುವ ಹಿನ್ನೆಲೆ ಉಳಿದ ರೆಬೆಲ್ ಟೀಮ್‌ನ ಸದಸ್ಯರು ಶಾಕ್‌ಗೆ ಒಳಗಾಗಿದ್ದಾರೆ. ವಕ್ಫ್ ಮೂಲಕ ವಿಜಯೇಂದ್ರ ನಾಯಕತ್ವದ ವಿರುದ್ಧ ಸಿಡಿದೆದ್ದಿದ್ದ ಅತೃಪ್ತರು, ಇದೀಗ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ನೋಟಿಸ್ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಯಲ್ಲಿದ್ದಾರೆ. ಆದರೆ, ಬಿಜೆಪಿಯ ಇನ್ನುಳಿದ ರೆಬೆಲ್ ನಾಯಕರಾದ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಪ್ರತಾಪ್ ಸಿಂಹ ಬೆಳಗಾವಿಯಲ್ಲಿದ್ದು,  ಇಂದು ಸಂಜೆ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ.

[ಹೌದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕುರಿತು ಇತ್ತೀಚೆಗೆ ದೆಹಲಿ ಪ್ರವಾಸ ಕೈಗೊಂಡಿದ್ದ ವಿಜಯೇಂದ್ರ ಅವರು, ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ನಾಯಕರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೆ ಯತ್ನಾಳ್ ನಡೆ ಹಾಗೂ ಪಕ್ಷದ ವಿರುದ್ಧ ತಮ್ಮ ನಿಲುವಿನ ಬಗ್ಗೆ ಸ್ಪಷ್ಟನೆ ಕೇಳಿ ಶೋಕಾಸ್ ನೋಟಿಸ್ ನೀಡಿದ್ದಾರೆ. ಯತ್ನಾಳ್ ವಿವರಣೆ ಏನಿರಲಿದೆ? ಹಾಗೂ ಹೈಕಮಾಂಡ್ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

Post a Comment

Previous Post Next Post