ಪಡಿತರ ಚೀಟಿದಾರರ ಇ-ಕೆವೈಸಿಗೆ ಜ.31 ಕಡೇ ದಿನ: ಆಹಾರ ಇಲಾಖೆಯ ಸೂಚನೆ


  ಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ (e-KYC) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್‌ (mapping) ಮಾಡಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇ-ಕೆವೈಸಿ ಪ್ರಕ್ರಿಯೆಗಾಗಿ ನಿಗದಿಪಡಿಸಿರುವ ಕೊನೆಯ ದಿನಾಂಕ ಜನವರಿ 31, 2025 ಆಗಿದೆ. ಇ-ಕೆವೈಸಿ ಪ್ರಕ್ರಿಯೆಯನ್ನು ನಡೆಸಲು ಫಲಾನುಭವಿಗಳು ತಮ್ಮ ಹತ್ತಿರದ ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಬಹುದು.


ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಆಹಾರ ಧಾನ್ಯ ವಿತರಣೆ ಸ್ಥಗಿತ


ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ಫಲಾನುಭವಿಗಳಿಗೆ, ಫೆಬ್ರವರಿ ತಿಂಗಳಿನಿಂದ ಆಹಾರ ಧಾನ್ಯಗಳ ವಿತರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.


ಹೀಗಾಗಿ, ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿಕೊಳ್ಳಬೇಕೆಂದು ಆಹಾರ ಇಲಾಖೆ ಮನವಿ ಮಾಡಿದೆ.

Post a Comment

Previous Post Next Post