ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮಾರ್ಗಸೂಚಿ : ಬಿ.ದಯಾನಂದ


 ಗಳೂರು,ಜ.28- ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ನಗರದಲ್ಲಿ ಇದುವರೆಗೂ ಯಾವುದೇ ದೂರುಗಳು ಬಂದಿಲ್ಲ, ಒಂದು ವೇಳೆ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಕ್ರೋ ಫೈನಾನ್‌್ಸ ಕಿರುಕುಳದ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಎರಡೂ ಸುತ್ತಿನ  ಸರ್ಕಾರ ಈ ಬಗ್ಗೆ ಕೆಲವೊಂದು ಗೈಡ್‌ಲೈನ್‌್ಸ (ಮಾರ್ಗಸೂಚಿ) ಜಾರಿಗೆ ಸೂಚನೆ ನೀಡಿದ್ದು, ಸರ್ಕಾರದ ಸೂಚನೆಯಂತೆ ಅದನ್ನು ಅನುಷ್ಠಾನ ಮಾಡಲಾಗುತ್ತದೆ ಎಂದರು.


ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್‌್ಸ ಕಿರುಕುಳದ ದೂರುಗಳು ಬಂದಿವೆ. ಆದರೆ ನಗರದಲ್ಲಿ ಇದುವರೆಗೂ ಯಾವುದೇ ದೂರು ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾವು ಈಗಾಗಲೇ ಅಧಿಕಾರಿಗಳ ಸಭೆ ನಡೆಸಿದ್ದು, ಒಂದು ವೇಳೆ ದೂರು ಬಂದರೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದರು. ಒಂದು ವೇಳೆ ಮೈಕ್ರೋ ಫೈನಾನ್‌್ಸನವರು ಕಿರುಕುಳ ನೀಡಿದರೆ ತಕ್ಷಣ 112 ಗೆ ಕರೆ ಮಾಡಬಹುದು ಅಥವಾ ಸಮೀಪದ ಪೊಲೀಸ್‌‍ ಠಾಣೆಗೆ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.


ಮೀಟರ್‌ ಬಡ್ಡಿ: ಹೆಚ್ಚಿನ ಮೀಟರ್‌ ಬಡ್ಡಿ ವಸೂಲಿ ಮಾಡುವವರ ವಿರುದ್ಧ ದೂರು ಕೊಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಈ ಬಗ್ಗೆ ನಮಗೆ ಈಗಾಗಲೇ ಕೆಲವು ದೂರುಗಳು ಬಂದಿದ್ದು ಅಂತವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಆಯುಕ್ತರು ವಿವರಿಸಿದರು.


ಆರೋಪಿಗಳಿಗೆ ಶೋಧ: ರಾಮಮೂರ್ತಿ ನಗರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಾಂಗ್ಲಾ ದೇಶದ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಆರೋಪಿಗಳ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ಎಲ್ಲಾ ತಂಡಗಳು ವಿವಿಧ ದೃಷ್ಟಿಕೋನಗಳಿಂದ ತನಿಖೆ ನಡೆಸುತ್ತಿವೆ. ವೈಜ್ಞಾನಿಕ, ತಂತ್ರಜ್ಞಾನಗಳನ್ನು ಬಳಸಿ ಆರೋಪಿಗಳ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು.

Post a Comment

Previous Post Next Post