Amith Shah: ‘ಹೋರಾಟ ಇನ್ನೂ ಮುಗಿದಿಲ್ಲ, ಒಬ್ಬ ಭಯೋತ್ಪಾದಕನನ್ನೂ ಬಿಡಲ್ಲ’; ಅಮಿತ್‌ ಶಾ ಖಡಕ್ ವಾರ್ನಿಂಗ್


 ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ರಸ್ತೆಯನ್ನು ಲೋಕಾರ್ಪಣೆ ಮಾಡಿ ಪ್ರತಿಮೆಯನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್‌ ಶಾ, "ಪಹಲ್ಗಾಮ್‌ನಲ್ಲಿ ನಾಗರಿಕರನ್ನು...ಇನ್ನಷ್ಟು ಸುದ್ದಿ

 ಅಸ್ಸಾಂ: ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌‌ನಲ್ಲಿ (Pahalgam Attack) ಅಮಯಾಕ ಪ್ರವಾಸಿಗರನ್ನು ಪಾಪಿ ಉಗ್ರರು ದಾಳಿ ಮಾಡಿ ಕೊಂದು ಬಿಟ್ಟಿದ್ದರು. ಆದ್ರೆ ಆ ನಂತರ ಉಗ್ರರ ವಿರುದ್ಧ ದೇಶದೆಲ್ಲೆಡೆ ಭಾರೀ ಆಕ್ರೋಶವೇ ಸೃಷ್ಟಿಯಾಗಿತ್ತು. ಅಲ್ಲದೇ ಕಳೆದ ವಾರ ಪ್ರಧಾನಿ ಮೋದಿಯವರು ದಾಳಿ ಮಾಡಿದ ಒಬ್ಬ ಉಗ್ರನನ್ನೂ ಬಿಡಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರು ಕೂಡಾ ಗುರುವಾರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾಡಿದ ಉಗ್ರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. "ಉಗ್ರರು 27 ಜನರನ್ನು ಕೊಂದು ಯುದ್ಧದಲ್ಲಿ ಗೆದ್ದಿದ್ದೇವೆ ಎಂದು ಭಾವಿಸಬಾರದು. ಈ ಹೋರಾಟ ಇನ್ನೂ ಮುಗಿದಿಲ್ಲ" ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಅಮಿತ್‌‌ ಶಾ, ಪಹಲ್ಗಾಮ್ ದಾಳಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಹೇಳಿದರು.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ರಸ್ತೆಯನ್ನು ಲೋಕಾರ್ಪಣೆ ಮಾಡಿ ಪ್ರತಿಮೆಯನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್‌ ಶಾ, "ಪಹಲ್ಗಾಮ್‌ನಲ್ಲಿ ನಾಗರಿಕರನ್ನು ಕೊಂದ ಪ್ರತಿಯೊಬ್ಬ ಉಗ್ರನನ್ನೂ ಹುಡುಕಿ ಶಿಕ್ಷಿಸಲಾಗುವುದು. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಿದೆ" ಎಂದು ಒತ್ತಿ ಹೇಳಿದರು.

Post a Comment

Previous Post Next Post