ಗಳೂರು, ಮೇ, 28: ರಾಜ್ಯದಲ್ಲಿ ಬೇಸಿಗೆ ರಜೆ ಮುಗಿದು ಶಾಲೆಗಳು ಮತ್ತೆ ಗುರುವಾರ (ಏಪ್ರಿಲ್ 29) ದಿಂದ ಆರಂಭವಾಗಲಿವೆ. ಈ ಹೊತ್ತಲೇ ಮತ್ತೆ ಮಹಾಮಾರಿ ಕೊರೊನಾ ಕಾಟ ಶುರುವಾಗಿದ್ದು, ರಜೆ ವಿಸ್ತರಣೆ ಯಾಗಲಿದೆ ಎಂದು ಬಹುತೇಕರು ಅಂದುಕೊಂಡಿದ್ದರು. ಆದರೆ, ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪ್ರಾರಂಭ ಆಗುತ್ತಿವೆ. ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಅಂತಹವರಿಗೆ ರಜೆ ನೀಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಆದರೆ, ಎಚ್ಚರಿಕೆ, ಮುಂಜಾಗೃತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದರೆ, ಅದನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು.
ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಯಂತೆ ನಾವು ಜಾರಿ ಮಾಡುತ್ತೇವೆ. ಈವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ನೀಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ಮಾಡಿ ಅದರಲ್ಲಿಯೇ ಕೆಲವು ಮಾರ್ಗಸೂಚಿಗಳನ್ನು ಸೂಚಿಸಿದ್ದು, ಅವರ ನಿರ್ದೇಶನ ಪಾಲನೆ ಮಾಡುತ್ತೇವೆಂದು ಹೇಳಿದರು.
ಕಟ್ಟಿನಿಟ್ಟಿನ ಕ್ರಮ: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಅದರಂತೆಯೇ ದೇವನಹಳ್ಳಿಯಲ್ಲಿಯೂ ಸಿದ್ಧತೆ ಆರಂಭ ಮಾಡಲಾಗಿದೆ. ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯಲ್ಲಿ ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ತೆರೆದಿದ್ದ ಆರ್‌ಟಿಪಿಸಿಆರ್ ಲ್ಯಾಬ್ ಅನ್ನು ಮಂಗಳವಾರ ಪುನರಾರಂಭಿಸಾಯಿತು.
ಅಧಿಕಾರಿಗಳು ಲ್ಯಾಬ್ನಲ್ಲಿರುವ ಟೆಸ್ಟಿಂಗ್ ಯಂತ್ರಗಳ ಪರಿಶೀಲನೆ ನಡೆಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮಾದರಿ ಸಂಗ್ರಹ ಹಾಗೂ ಪರೀಕ್ಷೆಗೆ ಆರ್‌ಟಿಪಿಸಿಆರ್ ಲ್ಯಾಬ್ ಪುನರಾರಂಭ ಮಾಡಲಾಗಿದೆ. ಲ್ಯಾಬ್ಗಳಿಗೆ ಬೆಂಗಳೂರು ಗ್ರಾಮಾಂತರ ಡಿಹೆಚ್‌ಒ ಕೃಷ್ಣಾರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದರು
ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರು ನಗರದ ಹೊರವಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹದ್ದಿನ ಕಟ್ಟಿನಿಟ್ಟಿನ ಕ್ರಮ ಕೈಗೊಂಡಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗದಂತೆ ಎಚ್ಚರಿಕೆ ವಹಿಸಿದೆ. ಅಲ್ಲದೆ, ಕೋವಿಡ್ ಪ್ರಕರಣಗಳ ಬಗ್ಗೆ ಗಮನಹರಿಸಿ, ಮಾದರಿ ಸಂಗ್ರಹ ಮಾಡುವಂತೆ ಜಿಲ್ಲಾ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಓಡಾಡುವಂತೆ ಸಲಹೆ ನೀಡಲಾಗದೆ.
Post a Comment