ತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಗಿರುವ ಬಗ್ಗೆ ವಿರೋಧ ಪಕ್ಷಗಳಿಂದ ಭಾರೀ ಅಸಮಾಧಾನ ವ್ಯಕ್ತವಾಗಿದೆ. ದೇಶದ ನೀತಿ ನಿರೂಪಣೆ ಹಾಗೂ ಅಭಿವೃದ್ಧಿ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನೀತಿ ಆಯೋಗದ ಸಭೆಯನ್ನು ಆಯೋಜಿಸಲಾಗಿತ್ತು.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆಗೆ ಗೈರಾಗಿದ್ದಾರೆ. ಇದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಜರಾಗದೆ ಇರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಅಸಮಾಧಾನ ಹೊರ ಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸರಳಿ ಪ್ರಶ್ನೆಗಳನ್ನು ಕೇಳಿದ್ದಾರೆ.
✅ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಲು ಸಮಯವಿದೆ
✅ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಸಮಯವಿದೆ
✅ಕುರ್ಚಿಗೆ ಕಂಟಕ ಬಂದಾಗ ಹೈಕಮಾಂಡ್ ಮನೆಬಾಗಿಲು ತಟ್ಟಲು ದೆಹಲಿಗೆ ಹೋಗಲು ಸಮಯವಿದೆ.
✅ಹುಟ್ಟುಹಬ್ಬಕ್ಕೆ ಕಬಿನಿಗೆ ಹೋಗಿ ಆನೆ, ಹುಲಿ ನೀಡಲು ಸಮಯವಿದೆ.
✅I.N.D.I ಮಿತ್ರ ಪಕ್ಷ ಡಿಎಂಕೆ ಕರೆದಾಗ ಚೆನ್ನೈಗೆ ಹೋಗಿ ರಾಜಕೀಯ ಮಾಡಲು ಸಮಯವಿದೆ.
✅ಎಐಸಿಸಿ ಸಭೆಗೆ ರಾಜಸ್ಥಾನದ ಜೈಪುರಕ್ಕೆ ಹೋಗಲು ಸಮಯವಿದೆ
ಆದರೆ ರಾಜ್ಯದ, ದೇಶದ ಅಭಿವೃದ್ಧಿಗಾಗಿ, ಭವಿಷ್ಯಕ್ಕಾಗಿ ಪ್ರಧಾನಮಂತ್ರಿಗಳು, ದೇಶದ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚಿಂತನ ಮಂಥನ ನಡೆಸುವ ಅತ್ಯಂತ ಪ್ರಮುಖ ವೇದಿಕೆಯಾದ ನೀತಿ ಆಯೋಗದ ಸಭೆಗೆ ಹೋಗಲು, ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ಹೋಗಲು ಇಬ್ಬರಿಗೂ ಪುರುಸೊತ್ತಿಲ್ಲ, ಆಸಕ್ತಿಯೂ ಇಲ್ಲ.
ನಿಮ್ಮಂತಹವರಿಗೆಲ್ಲ ಯಾಕೆ ಸ್ವಾಮಿ ರಾಜಕಾರಣ, ಸಾರ್ವಜನಿಕ ಜೀವನ ಎಂದು ಗಂಭೀರವಾಗಿ ಪ್ರಶ್ನೆ ಮಾಡಿರುವ ಅವರು, ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ರಾಜಕಾರಣ ಅಂದರೆ ಮೋಜು, ಮಸ್ತಿ ಮಾಡುವ ಅಧಿಕಾರದ ಸುಪ್ಪತ್ತಿಗೆಯೇ ಹೊರತು ಜನಕಲ್ಯಾಣ ಅಥವಾ ಅಭಿವೃದ್ದಿಯ ಬಗ್ಗೆ ಆಸಕ್ತಿಯೂ ಇಲ್ಲ, ಬದ್ಧತೆಯೂ ಇಲ್ಲ ಎಂದಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು: ಕೇಂದ್ರ ಸರ್ಕಾರದ ಮಹತ್ವದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಜರಾಗಿರುವುದನ್ನು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಸಹ ತರಾಟೆಗೆ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಕುಳಿತುಕೊಂಡು ಕೇಂದ್ರ ಸರ್ಕಾರವನ್ನು ಟೀಕೆ ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ದಾಖಲೆಯ ಪ್ರಮಾಣದ ಬಜೆಟ್ ಮಂಡಿಸಿದ್ದೇನೆ ಎನ್ನುವ ಅವರು ನೀತಿ ಆಯೋಗದಂತಹ ಪ್ರಮುಖ ಸಭೆಗೆ ಗೈರು ಆಗುವುದು ಎಷ್ಟು ಸರಿ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು ಸಂವಾದವೇ ಇಲ್ಲದಿದ್ದರೆ ಸಮಸ್ಯೆ ಹೇಗೆ ಮುಗಿಯುತ್ತದೆ. ರಾಜಕೀಯ ಪ್ರತಿಷ್ಠೆಗೆ ಕರ್ನಾಟಕದ ಹಿತವನ್ನು ಬಲಿಕೊಡುವುದು ತಪ್ಪು ಎಂದಿದ್ದಾರೆ.

Post a Comment