ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದೆ ಇದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಪೂರೈಸುವುದಾಗಿ ಭರವಸೆ ನೀಡಿದ್ದೆ ಎಂದ...ಇನ್ನಷ್ಟು ಸುದ್ದಿ
[ಪೌರಕಾರ್ಮಿಕರು
ಬೆಂಗಳೂರು: ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು (Municipal Workers) ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

Post a Comment