ಮುಖ ಭದ್ರತಾ ಕಾರ್ಯಾಚರಣೆಯೊಂದರಲ್ಲಿ, ಭಾರತೀಯ ಗುಪ್ತಚರ ಸಂಸ್ಥೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯರಾಗಿರುವ ಹರಿಯಾಣದ ಜನಪ್ರಿಯ ಮಹಿಳಾ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ.: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ, ಬೇಹುಗಾರಿಕೆ ಪ್ರಕರಣದಲ್ಲಿ ತಾನು ನಿರಪರಾಧಿ ಎಂದು ಒಪ್ಪಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜ್ಯೋತಿಯ ತಂದೆ ಹರೀಶ್ ಮಲ್ಹೋತ್ರಾ, 14 ದಿನಗಳ ಪೊಲೀಸ್ ಕಸ್ಟಡಿಯ ಮೊದಲ ದಿನದಂದು ಹಿಸಾರ್‌ನಲ್ಲಿರುವ ಸೆಂಟ್ರಲ್ ಜೈಲ್ ಸಂಖ್ಯೆ 2 ರಲ್ಲಿ ಅವರನ್ನು ಭೇಟಿ ಮಾಡಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಭಾವನಾತ್ಮಕವಾಗಿ ಮಾತನಾಡಿದ ಹರೀಶ್, ಜ್ಯೋತಿ ತಾನು ಮುಗ್ಧಳೆಂದು ಘೋಷಿಸಿಕೊಂಡಿದ್ದಾಳೆ, ತಾನು ನಿರಪರಾಧಿ ಎಂದು ಹೇಳಿದ್ದಾಳೆ ಎಂದು ಪ್ರತಿಕ್ರಿಯಿಸಿದ್ದಾರೆ.
ತನಿಖೆಯಲ್ಲಿ ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಮೂರು ತಿಂಗಳ ಮೊದಲು ಜ್ಯೋತಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ಗೆ ಭೇಟಿ ನೀಡಿದ್ದರು ಎಂಬುದಾಗಿ ತಿಳಿದು ಬಂದಿದೆ.
ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಜೊತೆ ಸಂಬಂಧ ಹೊಂದಿರುವ ಡ್ಯಾನಿಶ್ ಎಂದು ಗುರುತಿಸಲಾದ ಪಾಕಿಸ್ತಾನಿ ಹೈಕಮಿಷನ್ ಉದ್ಯೋಗಿಯೊಬ್ಬರು ಜ್ಯೋತಿಯನ್ನು ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿ ಹೇಳಿದ್ದೇನು?
ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಪುರಿಯ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಅದರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಇದೀಗ ನಮಗೆ ಬಂದಿದೆ. ಅವರು ಚಿಲಿಕಾ ಮತ್ತು ಕೊನಾರ್ಕ್‌ಗೆ ಸಹ ಭೇಟಿ ನೀಡಿದ್ದರು. ಅವರು ಒಡಿಶಾದ ಯೂಟ್ಯೂಬರ್ ಪ್ರಿಯಾಂಕಾ ಸೇನಾಪತಿ ಅವರೊಂದಿಗೆ ಸಂಪರ್ಕದಲ್ಲಿದ್ದರು. ನಾವು ಎಲ್ಲಾ ಸಂಗತಿಗಳನ್ನು ಪರಿಶೀಲಿಸುತ್ತಿದ್ದೇವೆ. ಜ್ಯೋತಿ ಮಲ್ಹೋತ್ರಾ ಕುರಿತು ಹರಿಯಾಣದಲ್ಲಿರುವ ಕೆಲ ಸಂಸ್ಥೆಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
(ಏಜೆನ್ಸೀಸ್)
Post a Comment