ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈ ರ್ಯಾಲಿ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಎಚ್ಚರಿಕೆ ಗಂಟೆ ಕೊಡುವ ಕೆಲಸ ಇಲ್ಲಿಂದ...ಇನ್ನಷ್ಟು ಸುದ್ದಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ
ಹುಬ್ಬಳ್ಳಿ: ನಾನು ಮೋದಿ (Modi), ಅಮಿತ್ ಶಾ (Amit Shah) ಸೇರಿದಂತೆ ಯಾರಿಗೂ ಹೆದರಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಕೇಂದ್ರ ಸರ್ಕಾರದ (Central Govt) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಇಲ್ಲಿಂದ ನಡೆಯುತ್ತಿದೆ ಎಂದು ಹೇಳಿದರು.
ಈ ರ್ಯಾಲಿ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ
ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈ ರ್ಯಾಲಿ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಎಚ್ಚರಿಕೆ ಗಂಟೆ ಕೊಡುವ ಕೆಲಸ ಇಲ್ಲಿಂದ ನಡೀತಿದೆ. ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಸಂವಿಧಾನ ಇದೆ ಅದಕ್ಕಾಗಿ ನಾವೆಲ್ಲರೂ ಸ್ವತಂತ್ರವಾಗಿ ಮಾತನಾಡೋ ಶಕ್ತಿ ಇದೆ. ಕಾಂಗ್ರೆಸ್ ಅನ್ನು ಬೆಂಬಲಿಸುವವರ ಮೇಲೆ ಇಡಿ, ಸಿಬಿಐ ತೋರಿಸಿ ಧಮ್ಕಿ ಹಾಕ್ತಿದೆ, ಇದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದರು.

Post a Comment