ಗಳೂರು : ವಿದ್ಯುತ್ ಸಂಪರ್ಕಕ್ಕೆ ಕಾಯುತ್ತಿರುವ 4 ಲಕ್ಷ ಬಡ, ಮಧ್ಯಮ ವರ್ಗದವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮನೆ, ಕಟ್ಟಡಗಳಿಗೆ ಕೂಡಲೇ ವಿದ್ಯುತ್ ನೀಡಲು ನ್ಯಾ. ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ.
ಹೌದು, ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಮೂರರಿಂದ ನಾಲ್ಕು ಲಕ್ಷ ಬಡ, ಮಧ್ಯಮ ವರ್ಗದ ಕುಟುಂಬದವರಿಗೆ ತೊಂದರೆಯಾಗಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಹೆಚ್.ಎನ್.
ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ.
ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಗಕ್ಕೆ ಈ ಕುರಿತು ಮನವಿ ಸಲ್ಲಿಸಲಾಗಿದ್ದು, ಮನವಿಗೆ ಸ್ಪಂದಿಸಿದ ಆಯೋಗ ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಸಂಬಂಧಿಸಿದವರಿಗೆ ಪತ್ರ ಬರೆದಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಎಸ್ಕಾಂಗಳು ಏಪ್ರಿಲ್ 4ರಿಂದ ಮನೆ, ವಾಣಿಜ್ಯ ಕಟ್ಟಡ, ಕೈಗಾರಿಕೆಗಳು ಸೇರಿ ಎಲ್ಲರಿಗೂ ತಾತ್ಕಾಲಿಕ, ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸುತ್ತಿವೆ. ಇದರಿಂದ ಬಡವರಿಗೆ ವಿಶೇಷವಾಗಿ ಮಕ್ಕಳ ಶಿಕ್ಷಣ, ಗ್ರಾಮೀಣ ಪ್ರದೇಶದ ಅಭಿವೃದ್ಧಿ, ಸಣ್ಣಪುಟ್ಟ ವ್ಯಾಪಾರಸ್ಥರು, ಕೈಗಾರಿಕೋದ್ಯಮಗಳಿಗೆ ತೊಂದರೆಯಾಗಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲು ಕ್ರಮ ಕೈಗೊಳ್ಳುವಂತೆ ಆಯೋಗದಿಂದ ಸೂಚನೆ ನೀಡಲಾಗಿದೆ.
Post a Comment