ಸೂರು: ಈ ಬಾರಿನಾಡ ಹಬ್ಬ ದಸರಾ ಉದ್ಘಾಟಕಿಯಾಗಿ ಬೂಕರ್ ವಿಜೇತೆ ಬಾನು ಮುಷ್ತಾಕ್ ಆಯ್ಕೆಯಾಗುತ್ತಲೇ ನಾನಾ ರೀತಿಯಲ್ಲಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ವ್ಯಕ್ತವಾಗುತ್ತಲೇ ಇದೆ. ಸದ್ಯ ಈ ಬಗ್ಗೆ ಪ್ರಮೋದಾ ದೇವಿ ಒಡೆಯರ್ ಮಾತನಾಡಿ, ದಸರಾ ಉದ್ಘಾಟನೆಗೆ ಯಾರನ್ನಾದರೂ ಆಯ್ಕೆ ಮಾಡಲಿ ಆ ಬಗ್ಗೆ ತಕರಾರಿಲ್ಲ.
ನಮ್ಮ ಮನೆ ದೇವರು ಚಾಮುಂಡೇಶ್ವರಿ ಮುನ್ನೆಲೆಗೆ ತಂದು ರಾಜಕೀಯವಾಗಿ ಚರ್ಚೆ ಮಾಡುವುದು ಬಗ್ಗೆ ಬೇಸರವನ್ನುಂಟು ಮಾಡಿದೆ ಎಂದು ಮೈಸೂರಿನಲ್ಲಿ ಹೇಳಿದರು.
ದಸರಾ ಹಬ್ಬ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ಯಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಹಬ್ಬದ ವಿಚಾರದದಲ್ಲಿ ರಾಜಕೀಯ ಮಾಡ್ಬೇಡಿ ಎಂದು ಕಿಡಿಕಾರುತ್ತಿದ್ದಾರೆ.
ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿ ಏನಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾತನಾಡಿ, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಎಂದು ತಿರುಗೇಟು ಕೊಟ್ಟಿದ್ದಾರೆ.
ಮೈಸೂರಲ್ಲಿ ಮಾತಾಡಿದ ಪ್ರಮೋದಾದೇವಿ ಒಡೆಯರ್, ʻಈ ವಿಚಾರದಲ್ಲಿ ಏನು ಹೇಳಬೇಕೋ ಎಲ್ಲವನ್ನೂ ನಾನು ಪತ್ರದಲ್ಲೇ ಹೇಳಿದ್ದೇನೆ. ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದು ಎಂದು ಪತ್ರದಲ್ಲಿ ಹೇಳಿದ್ದೇನೆ. ದೇವಸ್ಥಾನ ಹಿಂದೂ ಧಾರ್ಮಿಕ ಆಚರಣೆಯಲ್ಲೇ ನಡೆಯುತ್ತಿದೆ. ಚಾಮುಂಡಿ ಹಿಂದೂ ದೇವರು, ಯದುವಂಶದ ಮನೆ ದೇವರು. ಯದುವಂಶಕ್ಕೆ ಚಾಮುಂಡಿದೇವಿ ಧಾರ್ಮಿಕ ತಾಯಿ ಇದ್ದಂತೆ. ರಾಜಕಾರಣಿಗಳ ಏನೂ ಬೇಕಾದರು ಹೇಳಲಿ. ರಾಜಕಾರಣಿಗಳು ಹೇಳಿದ ತಕ್ಷಣ ಎಲ್ಲವೂ ಆಗಲ್ಲʼ ಎಂದು ಕಿಡಿಕಾರಿದ್ದಾರೆ.
ನಮ್ಮದು ಖಾಸಗಿ ದಸರಾ
ಚಾಮುಂಡಿ ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತ ಅಲ್ಲ. ಕೋರ್ಟ್ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗುವುದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿ ಕೊಂಡಿದ್ದಕ್ಕೆ ಬೇಸರವಿದೆ ಎಂದು ಪ್ರಮೋದಾದೇವಿ ವಿಷಾದ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರ ಅವರಿಗೆ ಬೇಕಾದ ರೀತಿಯಲ್ಲೇ ದಸರಾ ಮಾಡುತ್ತಾರೆ. ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ ಎಂದು ಪ್ರಮೋದಾದೇವಿ ಹೇಳಿದ್ದಾರೆ.
ಹೆಚ್ ವಿಶ್ವನಾಥ್ ಹೇಳಿದ್ದೇನು?
ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲು ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು.
ಸರ್ಕಾರ ಆಹ್ವಾನಿಸಿರುವ ಬಗ್ಗೆ ಮಾತನಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಮಾತನಾಡಬೇಕು. ಬಾನು ಮುಷ್ತಾಕ್ ಜೊತೆಗೆ ದೀಪಾ ಬಸ್ತಿಯವರನ್ನು ಕೂಡ ಕರೆದು ಅರಮನೆ ಮುಂಭಾಗದಲ್ಲಿ ಸನ್ಮಾನಿಸಿ ಅಭಿನಂದಿಸಬೇಕು. ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದ ಬಳಿಕ ಅರಮನೆ ಆವರಣದಲ್ಲಿ ಇಬ್ಬರನ್ನೂ ಸನ್ಮಾನಿಸಿ ಅಭಿನಂದಿಸಬೇಕು. ಕೇಂದ್ರ ಸಚಿವ ಶೋಭಾಕರಂದ್ಲಾಜೆ ಅವರು ಬಾನು ಮುಷ್ತಾಕ್ ಚಾಮುಂಡಿ ಬೆಟ್ಟ ಹತ್ತಲು ಬಿಡುವುದಿಲ್ಲ ಎಂದಿದ್ದಾರೆ. ಚಾಮುಂಡಿ ಬೆಟ್ಟ ಯಾವುದೇ ಒಂದು ಜಾತಿ, ಧರ್ಮದ ಆಸ್ತಿಯಲ್ಲ. ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರಿನಲ್ಲಿ ಹೇಳಿದರು.
Post a Comment