ಗಳೂರಿನಲ್ಲಿ ಲಕ್ಷಾಂತರ ಜನರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬಿಗ್‌ಶಾಕ್ ಕೊಟ್ಟಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಕ್ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯ ಸಂದರ್ಭದಲ್ಲಿಯೇ ಹೊಸದೊಂದು ವಿಷಯವನ್ನು ಹೇಳಲಾಗಿದೆ.
ಬೆಂಗಳೂರಿನ ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೀಡಿರುವ ಶಾಕ್ ಏನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನ ಮಹಾನಗರ ಪಾಲಿಕೆಗೆ ಅಥವಾ ನೂತವಾಗಿ ರಚನೆ ಆಗಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಹೊಸ ಪಾಲಿಕೆಗಳಿಗೆ ಆಗಲಿ. ಬೆಂಗಳೂರಿನ ಆಸ್ತಿಗಳಿಂದಲೇ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. ಈ ರೀತಿ ತೆರಿಗೆ ಸಂಗ್ರಹವಾಗುವ ಆಸ್ತಿಗಳಿಂದಲೇ ಬಿಬಿಎಂಪಿಯ ನಿರ್ವಹಣೆ ಹಾಗೂ ಬೆಂಗಳೂರಿನ ಮೂಲಸೌಕರ್ಯದ ವಿಚಾರದಲ್ಲಿ ಮಹತ್ವದ ಕೊಡುಗೆಯನ್ನು ಕೊಡುತ್ತದೆ. ಆದರೆ ಬೆಂಗಳೂರಿನ ಕೆಲವೊಂದು ಆಸ್ತಿದಾರರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ / ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು ಅವರಿಗೆ ಶಾಕ್ ನೀಡುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಅದರಲ್ಲಿ ಕೆಲವೊಂದು ಪ್ರಮುಖ ಆಸ್ತಿಗಳ ಆಸ್ತಿದಾರರು ಸರಿಯಾಗಿ ಆಸ್ತಿ ತೆರಿಗೆ ಪಾವತಿ ಮಾಡುತ್ತಿಲ್ಲ. ವರ್ಷಗಳಿಂದ ತೆರಿಗೆ ಪಾವತಿಸದ 786 ಕೋಟಿ ರೂ.ಗಳಿಗೆ ಸಂಬಂಧಿಸಿದಂತೆ 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡಿರುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟಾರೆ 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ (ಬಿಬಿಎಂಪಿಗೆ ಆಸ್ತಿ ತೆರಿಗೆ ಪಾವತಿಸದ) 786 ಕೋಟಿ ರೂ.ಗಳಿಗೆ ಎಲೆಕ್ಟ್ರಾನಿಕ್ ಡಿಮ್ಯಾಂಡ್ ನೋಟಿಸ್ ಕಳುಹಿಸಲಾಗಿದೆ.ಅವರು ಪಾವತಿಸದ ಆಸ್ತಿ ತೆರಿಗೆ ಸುಸ್ತಿದಾರರನ್ನು BBMPtax.karnataka.gov.in ನಲ್ಲಿ ಆನ್‌ಲೈನ್‌ನಲ್ಲಿ ಪಾವತಿಸಬೇಕಾಗುತ್ತದೆ.ಇಲ್ಲದಿದ್ದರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ತೆರಿಗೆ ಸುಸ್ತಿದಾರರು ಕಾರಣಗಳೊಂದಿಗೆ ಮೇಲ್ಮನವಿ ಸಲ್ಲಿಸಬಹುದು https://BBMPeNyaya. karnataka.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಆಸ್ತಿ ಮುಟ್ಟುಗೋಲು ಎಚ್ಚರಿಕೆ: ಇನ್ನು ಬೆಂಗಳೂರಿನಲ್ಲಿ ಬಿಬಿಎಂಪಿಗೆ ಆಸ್ತಿ ತೆರಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವವರಿಗೆ ಕೊನೆಯ ಎಚ್ಚರಿಕೆಯನ್ನು ನೀಡಲಾಗಿದ್ದು. ಈ ಬಾರಿಯೂ ಆಸ್ತಿ ತೆರಿಗೆಯನ್ನು ಪಾವತಿ ಮಾಡದಿದ್ದರೆ ಆಸ್ತಿಯನ್ನೇ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Post a Comment