engaluru Traffic Police: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಳ ವಾಗುತ್ತಿದೆ. ಅಲ್ಲದೇ ಇದೀಗ ಬೆಂಗಳೂರಿನಲ್ಲಿ ಪೀಕ್ ಅವರ್‌ನಲ್ಲಿ ಮಾತ್ರವಲ್ಲ ಇನ್ನುಳಿದ ಸಮಯದಲ್ಲೂ ಹೆಚ್ಚಾಗುತ್ತಿದೆ. ಇದೀಗ ಈ ಸಮಸ್ಯೆಗೆ ಮತ್ತೊಂದು ಪರಿಹಾರ ಕಂಡುಕೊಳ್ಳುವುದಕ್ಕೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.
ಅಲ್ಲದೇ ಇದೇ ಸಂದರ್ಭದಲ್ಲಿ ಒಂದು ದಿನದ ಮಟ್ಟಿಗೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಆಗುವ ಸುವರ್ಣ ಅವಕಾಶವೂ ಸಿಗುತ್ತಿದೆ. ಅದರ ವಿವರ ಇಲ್ಲಿದೆ.
ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಹೊಸದೊಂದು ಯೋಜನೆಯನ್ನು ಪರಿಚಯಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ಕಡಿಮೆಯಾಗುವುದಕ್ಕೆ ನೀವು ಸಹ ಕೊಡುಗೆ ಕೊಡಬಹುದು. ಅಲ್ಲದೇ ಒಂದು ದಿನ ಬೆಂಗಳೂರು ಟ್ರಾಫಿಕ್ ಪೊಲೀಸ್ / ಸ್ವಯಂಸೇವಕರಾಗಿ ನೀವು ಸೇವೆ ಸಲ್ಲಿಸಬಹುದು.
ನಾಗರಿಕ ಸಂಚಾರ ಪೊಲೀಸರು" ಆಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಹೇಗೆ ಇರುತ್ತದೆ. ಅದನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಹೇಗೆ ನಿರ್ವಹಿಸುತ್ತಾರೆ ಎನ್ನುವ ಮಾಹಿತಿ ಕೊಡಲಾಗುತ್ತದೆ.
ಒಂದು ದಿನದ ಬೆಂಗಳೂರು ಟ್ರಾಫಿಕ್ ಪೊಲೀಸ್ / ಸ್ವಯಂ ಸೇವಕರಾಗಿ ಅವಕಾಶ ಕೊಡುವ ಈ ಯೋಜನೆಯು ಎರಡು ಪ್ರಮುಖ ಉದ್ದೇಶಗಳನ್ನು ಹೊಂದಿದೆ. ಬೆಂಗಳೂರಲ್ಲಿ ಟ್ರಾಫಿಕ್ ಪೊಲೀಸರು ಎದುರುತ್ತಿರುವ ಸವಾಲುಗಳ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು ಮತ್ತು ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣ ಸುಧಾರಿಸಲು ಹೊಸ ಹಾಗೂ ಸಾರ್ವಜನಿಕರ ಐಡಿಯಾಗಳನ್ನು ಸಹ ಸೇರಿಸಿಕೊಳ್ಳುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಈ ಪ್ರಯೋಗವನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗುತ್ತಿದ್ದು. ಹಲವರು ಸಂತೋಷದಿಂದ ಭಾಗವಹಿಸಿದ್ದಾರೆ.
ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ಅಂತರ ಕಡಿಮೆ ಮಾಡುವ ಉದ್ದೇಶ
ಇನ್ನು ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಡಿಮೆ ಮಾಡುವುದು ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಹೊಸ ಯೋಜನೆಯನ್ನು ಪರಿಚಯ ಮಾಡಿರುವುದಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಹೇಗೆ ಎನ್ನುವ ಮಾಹಿತಿಯನ್ನೂ ಹಂಚಿಕೊಳ್ಳಲಾಗಿದೆ.
ಬೆಂಗಳೂರಿನ ಶಾಲೆಗಳು ಮತ್ತು ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವ ಉದ್ದೇಶದಿಂದ ವಿದ್ಯಾರ್ಥಿ "ಪೊಲೀಸ್ ಮಾರ್ಷಲ್‌ಗಳನ್ನು"ಗಳನ್ನು ನೇಮಿಸುವ ಯೋಜನೆಯನ್ನೂ ಈಚೆಗೆ ಪ್ರಯೋಗಿಸಲಾಗಿತ್ತು.
ಒಂದು ದಿನ ಬೆಂಗಳೂರು ಟ್ರಾಫಿಕ್ ಪೊಲೀಸ್ ಯೋಜನೆಗೆ ರಿಜಿಸ್ಟ್ರೇಷನ್ ಹೇಗೆ ?
ಇನ್ನು ಬೆಂಗಳೂರು ಟ್ರಾಫಿಕ್ ಜಾಮ್ ಪೊಲೀಸ್ ಆಗಿ ಒಂದು ದಿನ ಸ್ವಯಂ ಸೇವಕರಾಗಿ ಒಂದು ದಿನ ಸೇವೆ ಸಲ್ಲಿಸುವುದು ಹೇಗೆ ಎನ್ನುವುದನ್ನು ಸಹ ಬೆಂಗಳೂರು ಟ್ರಾಫಿಕ್ ಪೊಲೀಸರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಮೊದಲು ನೀವು BTP Astram Appನ ಮೂಲಕ ಸರಳವಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದಾಗಿದೆ. ಈ ಆಯಪ್ ಗೆ ಹೋಗಲಿ ಅದರಲ್ಲಿ Traffice Copy For Day ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದಾದ ಮೇಲೆ ನಿಮ್ಮ ವೈಯಕ್ತಿಕ ವಿವರಗಳನ್ನು ಸಲ್ಲಿಸಿ.

Post a Comment