ಕಾಂಗ್ರೆಸ್‌ನ ಒಂದು ಗುಂಪು ಬಿಜೆಪಿಗೆ ಬಂದರೆ ಸರ್ಕಾರ ರಚನೆ? ವಿಜಯೇಂದ್ರ ಪ್ರತಿಕ್ರಿಯೆ


 ರವಾರ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಡಿಕೆ ಶಿವಕುಮಾರ್ ಅವರಿಗೆ ಉಳಿದ ಅವಧಿಯ ಅಧಿಕಾರ ನೀಡಬೇಕು ಎಂದು ಕೆಲ ಶಾಸಕರು ಪಟ್ಟುಹಿಡಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಇನ್ನು ಹೈಕಮಾಂಡ್ ಸಹ ಮಧ್ಯ ಪ್ರವೇಶ ಮಾಡಿದ್ದು, ಶೀಘ್ರದಲ್ಲೇ ಗೊಂದಲಗಳನ್ನು ಬಗೆಹರಿಸುವುದಾಗಿ ಹೇಳಿದೆ. ಇತ್ತ ಬಿಜೆಪಿ ನಾಯಕರು ಕಾಂಗ್ರೆಸ್‌ನ ಪರಿಸ್ಥಿತಿಗೆ ಹಲವು ಟೀಕೆಗಳನ್ನು ಮಾಡಿದೆ, ಸರ್ಕಾರ ಬಿದ್ದುಹೋಗಲಿದೆ ಎನ್ನುವ ಅಭಿಪ್ರಾಯಗಳೂ ಸಹ ಕೆಲ ಬಿಜೆಪಿ ನಾಯಕರಿಂದ ಬಂದಿದೆ.


ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಮಾಧ್ಯಮದವರ ಜತೆ ಮಾತನಾಡಿದ್ದು, ಒಂದು ವೇಳೆ ಕಾಂಗ್ರೆಸ್‌ನ ಶಾಸಕರ ಗುಂಪು ಬಿಜೆಪಿಗೆ ಬಂದರೆ ಸ್ವೀಕರಿಸಿ ಸರ್ಕಾರ ರಚನೆ ಮಾಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.


ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ, ಭಾರತೀಯ ಜನತಾ ಪಕ್ಷವನ್ನು ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ವಿರೋಧ ಪಕ್ಷವಾಗಿ ಸರ್ಕಾರದ ಕಿವಿ ಹಿಂಡುವ ಕೆಲಸವನ್ನು ನಾವು ಮಾಡಿದ್ದೇವೆ, ಮುಂದೆಯೂ ಮಾಡಲಿದ್ದೇವೆ. ಯಾವುದೇ ಕಾರಣಕ್ಕೂ ಸರ್ಕಾರ ರಚಿಸುವ ಆಸಕ್ತಿಯಿಲ್ಲ, ವಿರೋಧ ಪಕ್ಷವಾಗಿ ನಾವು ಕೆಲಸ ಮಾಡುತ್ತೇವೆ ಎಂದು ವಿಜಯೇಂದ್ರ ಹೇಳಿಕೆ ನೀಡಿದರು.

Post a Comment

Previous Post Next Post