ಗಳೂರಿನ ಪ್ರಮುಖ ಪ್ರದೇಶದಲ್ಲಿ ಸರ್ಕಾರಿ ಆಸ್ತಿಗಳ ಮೇಲೆ ಮಾಡಿರುವ ಬೋಗಸ್ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಈ ರೀತಿ ಇರುವಾಗ ಕೆಲವರು ಸರ್ಕಾರಿ ಆಸ್ತಿ ಸೇರಿದಂತೆ ಕೆಲವೊಂದು ಆಸ್ತಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದ್ದು.
ಇದಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಆಡಳಿತ ಮುಂದಾಗಿದೆ.
ಇನ್ನು ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ತಿಗಳ ಮೇಲೆ ಮಾಡಿರುವ ಬೋಗಸ್ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕರಾದ ಕೃಷ್ಣಪ್ಪ ಅವರು ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯ ನಗರ ಕ್ಷೇತ್ರದ ನಾಗರಿಕ ಪ್ರಮುಖ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸರ್ಕಾರಿ ಆಸ್ತಿಗಳ ಮೇಲೆ ಮಾಡಿರುವ ಬೋಗಸ್ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕು ಹಾಗೂ ಕಂದಾಯ ಕಚೇರಿಗಳಲ್ಲಿ ಏಜೆಂಟ್‌ಗಳ ಹಾವಳಿಯನ್ನು ನಿಯಂತ್ರಣಗೊಳಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದ್ದಾರೆ.
ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರು ಮಾತನಾಡಿ, ಆಸ್ತಿಗಳ ತೆರಿಗೆ ಪರಿಷ್ಕರಣೆಗೆ ತ್ವರಿತ ಗೊಳಿಸಬೇಕೆಂದು ತಿಳಿಸಿದ್ದಾರೆ. ಸರಿಯಾಗಿ ಕಾರ್ಯನಿರ್ವಹಿಸದ ಕಂದಾಯ ಪರಿವೀಕ್ಷಕ ಹಾಗೂ ಕಂದಾಯ ವಸೂಲಿಗಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಅಲ್ಲದೇ ಅನಧಿಕೃತ ಪೇಯಿಂಗ್ ಗೆಸ್ಟ್‌ಗಳ ವಿರುದ್ಧ ಕಟ್ಟುನಿಟ್ಟಿನ ಜಾರಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಈ ಸಂಬಂಧ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದಾರೆ.
ಅಪಘಾತ ಪೀಡಿತ ಸ್ಥಳಗಳ ಕುರಿತು ಚರ್ಚಿಸಿ, ಯಾವುದೇ ಅಪಘಾತಗಳು ಸಂಭವಿಸಿದಂತೆ ರಂಬಲ್ ಸ್ಟ್ರಿಪ್ಗಳನ್ನು ಅಳವಡಿಸುವ ಕೆಲಸ ಆಗಬೇಕು. ಈ ಸಂಬಂಧ ಎಲ್ಲೆಲ್ಲಿ ಅಳವಡಿಸಬೇಕು ಎಂಬುದನ್ನು ಗುರುತಿಸಿ ಆದ್ಯತೆಯ ಮೇಲೆ ಕಾರ್ಯಗತಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಬೆಸ್ಕಾಂ ಮತ್ತು ಜಲಮಂಡಳಿ ಸಂಸ್ಥೆಗಳು ಯಾವುದೇ ಕಡೆಯಾಗಲಿ ರಸ್ತೆ ಕತ್ತರಿಸುವ ಕೆಲಸ ಕೈಗೊಳ್ಳುವ ಮೊದಲು ಪಾಲಿಕೆಯಿಂದ ಪೂರ್ವಾನುಮತಿ ಪಡೆಯಬೇಕು ಮತ್ತು ತಮ್ಮ ಕಾಮಗಾರಿಗಳ ಯೋಜನೆಗಳನ್ನು ವಿಭಾಗೀಯ ಇಂಜಿನಿಯರ್‌ರೊಂದಿಗೆ ಹಂಚಿಕೊಳ್ಳಬೇಕೆಂದು ಹೇಳಲಾಗಿದೆ.
ಪಾಲಿಕೆಯಿಂದ ಈ ಹಿಂದೆ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾಗಳನ್ನು ನವೀಕರಿಸಿ, ಅವುಗಳ ಲೈವ್ ಫೀಡ್ ಸಂಬಂಧಿತ ಪೊಲೀಸ್ ಠಾಣೆಗೆ ಒದಗಿಸಬೇಕು. ಅಲ್ಲದೆ ಅನಧಿಕೃತ ಉದ್ದಿಮೆ ಪರವಾನಗಿ ಹಾಗೂ ಅನಧಿಕೃತ ಆಸ್ಪತ್ರೆಗಳ ಮೇಲೆ ಹೆಚ್ಚು ನಿಗಾವಹಿಸಬೇಕೆಂದು ಎಂದು ಹೇಳಲಾಗಿದೆ. ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ನಿರ್ದೇಶನ ನೀಡಲಾಯಿತು. ಡಿಸೆಂಬರ್ 15 ನಂತರ ನಗರದ ಸುಂದರೀಕರಣ ಅಭಿಯಾನವನ್ನು ಕೈಗೊಳ್ಳುವುದಾಗಿ ಆಯುಕ್ತರು ಘೋಷಿಸಿದರು.
ಹೊಸಹಳ್ಳಿ ಪ್ರದೇಶದಲ್ಲಿನ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ಆ ಕೆಲಸ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಅದಕ್ಕೆ ವೇಗ ನೀಡಿ, ಶೀಘ್ರ ಮುಗಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ವೇಳೆ ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಕಂದಾಯ ವಿಭಾಗದ ಅಪರ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಸಂಗಪ್ಪ, ಮುಖ್ಯ ಎಂಜಿನಿಯರರು, ಕಾರ್ಯಪಾಲಕ ಎಂಜಿನಿಯರರು, ಕಂದಾಯ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment