BS YEDIYURAPPA: ಆರ್‌ಎಸ್‌ಎಸ್‌, ಯಡಿಯೂರಪ್ಪ ವಿರುದ್ಧ ಸುರೇಶ್ ಗೌಡ ಆರೋಪ- ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ


 ಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಸುರೇಶ್ ಗೌಡ (Suresh Gowda) ಅವರು ಮಾಡಿರುವ ಆರೋಪ ಸಂಬಂಧ ರಾಜ್ಯ ಸರ್ಕಾರ ಇದೀಗ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಬುಧವಾರ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದು ತನಿಖೆಗೆ ಆದೇಶಿಸಿದೆ. ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಅಧ್ಯಕ್ಷ ಎಚ್‌ಜಿ ರಮೇಶ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಸುರೇಶ್ ಗೌಡ ಅವರು ಮಾಡಿರುವ ಆರೋಪ ಕುರಿತು ಪ್ರಸ್ತಾಪಿಸಿದ್ದಾರೆ.


ಪತ್ರದಲ್ಲಿ ಯಡಿಯೂರಪ್ಪ ಒಂದು ಮಾಧ್ಯಮ ಸಂಸ್ಥೆಗೆ 5 ಕೋಟಿ ರೂ. ಪಾವತಿಸಿದ್ದಾರೆ. ಭೂ ಸಂಬಂಧಿತ ವಿಷಯಗಳಲ್ಲಿ ಮತ್ತೊಂದು ಮಾಧ್ಯಮ ಸಂಸ್ಥೆಗೆ ಅಕ್ರಮವಾಗಿ ಹಣದ ನೆರವು ನೀಡಿದ್ದಾರೆಂದು ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಆರ್‌ಎಸ್‌ಎಸ್‌ಗೆ ವಿವಿಧ ಕಾನೂನುಬಾಹಿರ ಅನುಕೂಲಗಳನ್ನು ನೀಡಿದೆ ಎಂದು ಆರೋಪಿಸಲಾಗಿದೆ.


ಈ ಆರೋಪಗಳು ಗಂಭೀರ ಸ್ವರೂಪದ್ದಾಗಿದ್ದು ಸಾರ್ವಜನಿಕ ಪ್ರಾಮಾಣಿಕತೆ, ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿವೆ. ಈ ಆರೋಪಗಳನ್ನು ಪರಿಶೀಲಿಸಲು ಮತ್ತು ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸೂಕ್ತ ಸಂಸ್ಥೆಯ ಮೂಲಕ ವಿವರವಾದ ತನಿಖೆಯನ್ನು ಪ್ರಾರಂಭಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.


ಮುಖ್ಯಮಂತ್ರಿಗಳ ಕಚೇರಿ ಸೂಚನೆ ಬೆನ್ನಲ್ಲೇ ಇದೀಗ ಗೃಹ ಸಚಿವರು ಯಾವ ತನಿಖಾ ವಿಭಾಗಕ್ಕೆ ಪ್ರಕರಣವನ್ನು ಹಸ್ತಾಂತರಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Post a Comment

Previous Post Next Post