HDK V/s DK SHIVAKUMAR: ಹೆಚ್‌ಡಿಕೆ- ಡಿಕೆಶಿ ನಡುವೆ 'ಶ್ರೀ' ಸಂಘರ್ಷ-


 ಗಳೂರು: ಒಕ್ಕಲಿಗ (Vokkaliga) ಮಠದ ಹಿರಿಯ ಸ್ವಾಮೀಜಿ ಇಲ್ಲದಿದ್ದರೆ, ದೇವೇಗೌಡರು (HD Devegowda) ಮುಖ್ಯಮಂತ್ರಿ ಆಗುತ್ತಿದ್ದರೇ?, ಸದಾನಂದಗೌಡರಿಗೆ (Sadananda Gowda) ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ರಾ? ಕೆಲವು ಸಂದರ್ಭಗಳಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ, ಅದರಲ್ಲಿ ತಪ್ಪೇನಿದೆ?

[ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಅಂದು ದೇವೇಗೌಡರ ಪರ ಸ್ವಾಮೀಜಿ ರಸ್ತೆಗಿಳಿಯಲಿಲವೇ?, ಕುಮಾರಸ್ವಾಮಿಗೆ ಒಕ್ಕಲಿಗರ 2ನೇ ಮಠ ಹೇಗಾಯ್ತು ಎಂಬುದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿ ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ ಎಂದು ಡಿಕೆಶಿ ಟಾಂಗ್‌ ಕೊಟ್ಟರು.

ನಾನು ಸ್ವಾಮೀಜಿ ಬೆಂಬಲವನ್ನು ಕೇಳಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ನಾನು ಕೇಳಿದ್ದೇನಾ? ನಾನು ಕೂಡ ಯಾರ ಬೆಂಬಲವನ್ನೂ ಕೇಳಿಲ್ಲ. ಅವರು ಪ್ರೀತಿಯಿಂದ ಮಾತಾಡಿದರೆ ಬೇಡ ಎನ್ನಲು ಸಾಧ್ಯವೇ? ನಾನು ಒಂದು ಸಮುದಾಯದಲ್ಲಿ ಹುಟ್ಟಿದ್ದರೂ ಎಲ್ಲ ಸಮುದಾಯಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ಬಾಳೆಹೊನ್ನೂರು ಸ್ವಾಮೀಜಿ, ಶ್ರೀಶೈಲ ಸ್ವಾಮೀಜಿಗಳು ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಪ್ರೀತಿ, ವಿಶ್ವಾಸ ಇದೆ. ಹೀಗಾಗಿ ಮಾತನಾಡಿದ್ದಾರೆ. ಜೈನ ಸ್ವಾಮೀಜಿಗಳು ಕೂಡ ದೊಡ್ಡ ಸಮಾವೇಶದಲ್ಲಿ ಬಹಿರಂಗವಾಗಿ ಆಶೀರ್ವಾದ ಮಾಡಿದ್ದರು. ಧರ್ಮಸ್ಥಳಕ್ಕೆ ಹೋದಾಗಲೂ ನನಗೆ ಬೆಂಬಲ ನೀಡಿದರು. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಹೆಚ್‌ಡಿಕೆ ಹೇಳಿದ್ದೇನು..?: ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹೆಚ್‌ಡಿಕೆ, ಹೆಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದು ಅವರ ಶ್ರಮದಿಂದ. ಯಾವ ಸ್ವಾಮೀಜಿಗಳನ್ನೂ ಮುಂದಿಟ್ಟುಕೊಂಡು ರಾಜಕಾರಣ ಮಾಡಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್ ನಾಯಕರಿಗೆ ಚರ್ಚೆ ಮಾಡುವ ನೈತಿಕತೆ ಇಲ್ಲ. ಈ ರೀತಿ ರಾಜಕಾರಣ ಮಾಡಿದ್ದರೆ 1978ರಲ್ಲೇ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿದ್ದರು.1994ರಲ್ಲಿ ಇಡೀ ರಾಜ್ಯದಲ್ಲಿ ಬೆಂಬಲ ಸಿಕ್ಕಿತ್ತು. ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿಲ್ಲ. ಆಗ ಸ್ವಾಮೀಜಿಗಳು ಜಾತಿಗಣತಿ ಗಲಾಟೆಯಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯ ಆಗಿದೆ ಎಂದು ಕಾರ್ಯಕ್ರಮ ಮಾಡಿದ್ದರು. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳಿಲ್ಲ. ಡಿಕೆಶಿ ಏನಾದರೂ ಹೇಳಿಕೊಳ್ಳಲಿ. ಎಲ್ಲ ಮಠಾಧೀಶರಿಗೂ ಕೈ ಜೋಡಿಸಿ ಮನವಿ ಮಾಡುತ್ತೇನೆ. ನಿಮ್ಮ ಸಮಾಜದ ಅಭಿವೃದ್ಧಿಗೆ ನೀವು ಕ್ರಮ ಕೈಗೊಳ್ಳಿ. ರಾಜಕೀಯ ಏತಕ್ಕೆ? ನಮ್ಮ ಸ್ವಾರ್ಥಕ್ಕೆ ಮಠಾಧೀಶರಿಗೆ ಅಗೌರವ ತರಬಾರದು ಎಂದು ತಿಳಿಸಿದ್ದರು.

Post a Comment

Previous Post Next Post